2 ನಾನು ಕುಳಿತುಕೊಳ್ಳುವುದು, ಏಳುವುದು ನಿನಗೆ ಗೊತ್ತಿದೆ, ದೂರದಿಂದಲೇ ನನ್ನ ಆಲೋಚನೆಗಳನ್ನು ಬಲ್ಲವನಾಗಿರುತ್ತಿ.
3 ನಾನು ನಡೆಯುವುದನ್ನು, ಮಲಗುವುದನ್ನು ಶೋಧಿಸಿ ಗ್ರಹಿಸಿಕೊಳ್ಳುತ್ತಿ, ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ.
4 ಯೆಹೋವನೇ, ನನ್ನ ನಾಲಿಗೆಯ ಮಾತುಗಳಲ್ಲಿ, ನೀನು ಅರಿಯದೆ ಇರುವಂಥದು ಒಂದೂ ಇಲ್ಲ.
5 ಸುತ್ತಲೂ ನನ್ನನ್ನು ಆವರಿಸಿ, ನಿನ್ನ ಕೈಯನ್ನು ನನ್ನ ಮೇಲೆ ಇಟ್ಟಿದ್ದಿ.
6 ಇಂಥ ಜ್ಞಾನವು ನನಗೆ ಬಹು ಆಶ್ಚರ್ಯವಾಗಿದೆ; ಅದು ಉನ್ನತವಾದದ್ದು, ನನಗೆ ನಿಲುಕುವುದಿಲ್ಲ.
7 ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಳ್ಳುವಂತೆ ಎಲ್ಲಿಗೆ ಹೋಗಲಿ? ನಿನ್ನ ಕಣ್ಣಿಗೆ ಮರೆಯಾಗುವಂತೆ ಎಲ್ಲಿಗೆ ಓಡಲಿ?