4ಯೆಹೋವನೇ, ನನ್ನ ನಾಲಿಗೆಯ ಮಾತುಗಳಲ್ಲಿ, ನೀನು ಅರಿಯದೆ ಇರುವಂಥದು ಒಂದೂ ಇಲ್ಲ.
5ಸುತ್ತಲೂ ನನ್ನನ್ನು ಆವರಿಸಿ, ನಿನ್ನ ಕೈಯನ್ನು ನನ್ನ ಮೇಲೆ ಇಟ್ಟಿದ್ದಿ.
6ಇಂಥ ಜ್ಞಾನವು ನನಗೆ ಬಹು ಆಶ್ಚರ್ಯವಾಗಿದೆ; ಅದು ಉನ್ನತವಾದದ್ದು, ನನಗೆ ನಿಲುಕುವುದಿಲ್ಲ.
7ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಳ್ಳುವಂತೆ ಎಲ್ಲಿಗೆ ಹೋಗಲಿ? ನಿನ್ನ ಕಣ್ಣಿಗೆ ಮರೆಯಾಗುವಂತೆ ಎಲ್ಲಿಗೆ ಓಡಲಿ?
8ಮೇಲಣ ಲೋಕಕ್ಕೆ ಏರಿಹೋದರೆ ಅಲ್ಲಿ ನೀನಿರುತ್ತಿ, ಪಾತಾಳಕ್ಕೆ ಹೋಗಿ ಮಲಗಿಕೊಂಡೇನೆಂದರೆ ಅಲ್ಲಿಯೂ ನೀನಿರುವಿ.
9ಅರುಣನ ರೆಕ್ಕೆಗಳನ್ನು ಕಟ್ಟಿಕೊಂಡು ಹಾರಿಹೋಗಿ, ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಲು ಪ್ರಯತ್ನಿಸಿದರೆ,
10ಅಲ್ಲಿಯೂ ನಿನ್ನ ಕೈ ನನ್ನನ್ನು ನಡೆಸುವುದು; ನಿನ್ನ ಬಲಗೈ ನನ್ನನ್ನು ಹಿಡಿದಿರುವುದು.