6ಇಂಥ ಜ್ಞಾನವು ನನಗೆ ಬಹು ಆಶ್ಚರ್ಯವಾಗಿದೆ; ಅದು ಉನ್ನತವಾದದ್ದು, ನನಗೆ ನಿಲುಕುವುದಿಲ್ಲ.
7ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಳ್ಳುವಂತೆ ಎಲ್ಲಿಗೆ ಹೋಗಲಿ? ನಿನ್ನ ಕಣ್ಣಿಗೆ ಮರೆಯಾಗುವಂತೆ ಎಲ್ಲಿಗೆ ಓಡಲಿ?
8ಮೇಲಣ ಲೋಕಕ್ಕೆ ಏರಿಹೋದರೆ ಅಲ್ಲಿ ನೀನಿರುತ್ತಿ, ಪಾತಾಳಕ್ಕೆ ಹೋಗಿ ಮಲಗಿಕೊಂಡೇನೆಂದರೆ ಅಲ್ಲಿಯೂ ನೀನಿರುವಿ.
9ಅರುಣನ ರೆಕ್ಕೆಗಳನ್ನು ಕಟ್ಟಿಕೊಂಡು ಹಾರಿಹೋಗಿ, ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಲು ಪ್ರಯತ್ನಿಸಿದರೆ,
10ಅಲ್ಲಿಯೂ ನಿನ್ನ ಕೈ ನನ್ನನ್ನು ನಡೆಸುವುದು; ನಿನ್ನ ಬಲಗೈ ನನ್ನನ್ನು ಹಿಡಿದಿರುವುದು.
11ಕಾರ್ಗತ್ತಲೆಯು ನನ್ನನ್ನು ಕವಿಯುವುದು, “ಹಗಲು ಹೋಗಿ ನನ್ನ ಸುತ್ತಲು ಇರುಳಾಗುವುದು” ಎಂದು ಹೇಳಿಕೊಂಡರೇನು?