Text copied!
Bibles in Kannada

ಕೀರ್ತ 139:6-18 in Kannada

Help us?

ಕೀರ್ತ 139:6-18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇಂಥ ಜ್ಞಾನವು ನನಗೆ ಬಹು ಆಶ್ಚರ್ಯವಾಗಿದೆ; ಅದು ಉನ್ನತವಾದದ್ದು, ನನಗೆ ನಿಲುಕುವುದಿಲ್ಲ.
7 ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಳ್ಳುವಂತೆ ಎಲ್ಲಿಗೆ ಹೋಗಲಿ? ನಿನ್ನ ಕಣ್ಣಿಗೆ ಮರೆಯಾಗುವಂತೆ ಎಲ್ಲಿಗೆ ಓಡಲಿ?
8 ಮೇಲಣ ಲೋಕಕ್ಕೆ ಏರಿಹೋದರೆ ಅಲ್ಲಿ ನೀನಿರುತ್ತಿ, ಪಾತಾಳಕ್ಕೆ ಹೋಗಿ ಮಲಗಿಕೊಂಡೇನೆಂದರೆ ಅಲ್ಲಿಯೂ ನೀನಿರುವಿ.
9 ಅರುಣನ ರೆಕ್ಕೆಗಳನ್ನು ಕಟ್ಟಿಕೊಂಡು ಹಾರಿಹೋಗಿ, ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಲು ಪ್ರಯತ್ನಿಸಿದರೆ,
10 ಅಲ್ಲಿಯೂ ನಿನ್ನ ಕೈ ನನ್ನನ್ನು ನಡೆಸುವುದು; ನಿನ್ನ ಬಲಗೈ ನನ್ನನ್ನು ಹಿಡಿದಿರುವುದು.
11 ಕಾರ್ಗತ್ತಲೆಯು ನನ್ನನ್ನು ಕವಿಯುವುದು, “ಹಗಲು ಹೋಗಿ ನನ್ನ ಸುತ್ತಲು ಇರುಳಾಗುವುದು” ಎಂದು ಹೇಳಿಕೊಂಡರೇನು?
12 ನಿನಗೆ ಕತ್ತಲೆಯು ಕತ್ತಲೆಯಲ್ಲ; ಇರುಳು ಹಗಲಾಗಿಯೇ ಇರುತ್ತದೆ, ಕತ್ತಲು ಬೆಳಕುಗಳೆರಡೂ ನಿನಗೆ ಒಂದೇ.
13 ನನ್ನ ಅಂತರಿಂದ್ರಿಯಗಳನ್ನು ಉಂಟುಮಾಡಿದವನೂ, ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನಲ್ಲವೋ?
14 ನೀನು ನನ್ನನ್ನು ಅದ್ಭುತವಾಗಿಯೂ, ವಿಚಿತ್ರವಾಗಿಯೂ ರಚಿಸಿದ್ದರಿಂದ, ನಿನ್ನನ್ನು ಕೊಂಡಾಡುತ್ತೇನೆ. ನಿನ್ನ ಕೃತ್ಯಗಳು ಆಶ್ಚರ್ಯವಾಗಿವೆಯೆಂದು, ನನ್ನ ಹೃದಯವು ಚೆನ್ನಾಗಿ ಗ್ರಹಿಸಿಕೊಂಡಿದೆ.
15 ನಾನು ಗುಪ್ತಸ್ಥಳದಲ್ಲಿ ಏರ್ಪಡುತ್ತಾ, ಭೂಗರ್ಭದಲ್ಲಿ ರಚಿಸಲ್ಪಡುತ್ತಾ ಇದ್ದಾಗ, ನನ್ನ ಅಸ್ಥಿಪಂಜರವು ನಿನಗೆ ಮರೆಯಾಗಿದ್ದಿಲ್ಲ.
16 ನಾನು ಇನ್ನೂ ಕೇವಲ ಪಿಂಡವಾಗಿರುವಾಗ, ನಿನ್ನ ಕಣ್ಣುಗಳು ನನ್ನನ್ನು ನೋಡಿದವು, ನನ್ನ ಆಯುಷ್ಕಾಲದ ಪ್ರಥಮದಿನವು ಪ್ರಾರಂಭವಾಗುವ ಮೊದಲೇ, ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು.
17 ದೇವರೇ, ನಿನ್ನ ಸಂಕಲ್ಪಗಳು ನನ್ನ ಎಣಿಕೆಯಲ್ಲಿ ಎಷ್ಟೋ ಗೌರವವಾಗಿವೆ, ಅವುಗಳು ಎಷ್ಟೋ ಅಸಂಖ್ಯವಾಗಿವೆ.
18 ಅವುಗಳನ್ನು ಲೆಕ್ಕಿಸುವುದಾದರೆ ಸಮುದ್ರದ ಮರಳಿಗಿಂತ ಹೆಚ್ಚಾಗಿವೆ, ನಾನು ಎಚ್ಚರವಾಗಲು ಮೊದಲಿನಂತೆಯೇ ನಿನ್ನ ಬಳಿಯಲ್ಲಿರುತ್ತೇನೆ.
ಕೀರ್ತ 139 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019