Text copied!
Bibles in Kannada

ಕೀರ್ತ 13:1-5 in Kannada

Help us?

ಕೀರ್ತ 13:1-5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ರಚಿಸಿದ ಕೀರ್ತನೆ. ಯೆಹೋವನೇ, ನೀನು ಇನ್ನೆಷ್ಟರವರೆಗೆ ನನ್ನನ್ನು ಸಂಪೂರ್ಣವಾಗಿ ಮರೆತಿರುವಿ? ಇನ್ನೆಲ್ಲಿಯ ತನಕ ನನಗೆ ವಿಮುಖನಾಗಿರುವಿ?
2 ನಾನು ಇನ್ನೆಷ್ಟರವರೆಗೆ ಹಗಲೆಲ್ಲಾ ದುಃಖಾಕ್ರಾಂತನಾಗಿದ್ದು, ಆಲೋಚಿಸಿಕೊಳ್ಳುತ್ತಾ ಇರಬೇಕು? ಇನ್ನೆಲ್ಲಿಯ ತನಕ ವಿರೋಧಿಯು ನನಗೆ ದೊರೆಯಾಗಿರಬೇಕು?
3 ಯೆಹೋವನೇ, ನನ್ನ ದೇವರೇ, ನನ್ನಲ್ಲಿ ದೃಷ್ಟಿಯಿಟ್ಟು ನನಗೆ ಸದುತ್ತರವನ್ನು ದಯಪಾಲಿಸು; ನನಗೆ ಮರಣನಿದ್ರೆಯು ಉಂಟಾಗದಂತೆ ನನ್ನ ಕಣ್ಣುಗಳನ್ನು ಕಳೆಗೊಳಿಸು.
4 ನನ್ನ ಶತ್ರುವು, “ನಾನು ಅವನನ್ನು ಜಯಿಸಿದೆನು” ಎಂದು ಹೇಳಿಕೊಳ್ಳಬಾರದು; ವೈರಿಗಳು, “ನನ್ನ ಎದುರಾಳಿಯು ಜಾರಿಬಿದ್ದನು” ಎಂದು ಹಿಗ್ಗಬಾರದು.
5 ನಾನಂತೂ ನಿನ್ನ ಕೃಪೆಯಲ್ಲಿ ಭರವಸವಿಟ್ಟಿದ್ದೇನೆ; ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಹೃದಯವು ಹರ್ಷಗೊಳ್ಳುವುದು.
ಕೀರ್ತ 13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019