1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು, ದಾವೀದನ ಕೀರ್ತನೆ. ಯೆಹೋವನೇ, ಕೆಡುಕರಿಂದ ನನ್ನನ್ನು ಬಿಡಿಸು, ಬಲಾತ್ಕಾರಿಗಳಿಂದ ತಪ್ಪಿಸಿ ಕಾಪಾಡು.
2ಅವರು ಕೇಡು ಕಲ್ಪಿಸುತ್ತಾರೆ, ಯಾವಾಗಲೂ ಜಗಳವೆಬ್ಬಿಸುತ್ತಾರೆ.
3ತಮ್ಮ ನಾಲಿಗೆಯನ್ನು ಸರ್ಪದಂತೆ ಹದಮಾಡಿದ್ದಾರೆ, ಅವರ ತುಟಿಗಳ ಹಿಂದೆ ಹಾವಿನ ವಿಷವಿದೆ. ಸೆಲಾ
4ಯೆಹೋವನೇ, ದುಷ್ಟರ ಕೈಗೆ ಸಿಕ್ಕದಂತೆ ನನ್ನನ್ನು ಕಾಪಾಡು, ಬಲಾತ್ಕಾರಿಗಳಿಂದ ತಪ್ಪಿಸಿ ರಕ್ಷಿಸು. ಅವರು ನನ್ನ ಕಾಲುಗಳನ್ನು ಎಡವಿಸಿಬಿಡಬೇಕೆಂದು ಯೋಚಿಸಿದ್ದಾರೆ.