Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 140

ಕೀರ್ತ 140:4-10

Help us?
Click on verse(s) to share them!
4ಯೆಹೋವನೇ, ದುಷ್ಟರ ಕೈಗೆ ಸಿಕ್ಕದಂತೆ ನನ್ನನ್ನು ಕಾಪಾಡು, ಬಲಾತ್ಕಾರಿಗಳಿಂದ ತಪ್ಪಿಸಿ ರಕ್ಷಿಸು. ಅವರು ನನ್ನ ಕಾಲುಗಳನ್ನು ಎಡವಿಸಿಬಿಡಬೇಕೆಂದು ಯೋಚಿಸಿದ್ದಾರೆ.
5ಗರ್ವಿಷ್ಠರು ನನಗೋಸ್ಕರ ಗುಪ್ತಸ್ಥಳದಲ್ಲಿ ಉರುಲನ್ನೂ, ಪಾಶಗಳನ್ನೂ ಒಡ್ಡಿದ್ದಾರೆ, ದಾರಿಯ ಮಗ್ಗುಲಲ್ಲಿ ಬಲೆಹಾಸಿದ್ದಾರೆ, ನನಗಾಗಿ ಬಲೆಬೀಸಿಟ್ಟಿದ್ದಾರೆ. ಸೆಲಾ
6ನಾನು ಯೆಹೋವನಿಗೆ, “ನೀನೇ ನನ್ನ ದೇವರು, ಯೆಹೋವನೇ, ನನ್ನ ವಿಜ್ಞಾಪನೆಗೆ ಕಿವಿಗೊಡು,
7ಕರ್ತನೇ, ಯೆಹೋವನೇ, ನನ್ನ ಆಶ್ರಯದುರ್ಗವೇ, ಯುದ್ಧ ಸಮಯದಲ್ಲಿ ನೀನೇ ನನ್ನ ಶಿರಸ್ತ್ರಾಣ,
8ಯೆಹೋವನೇ, ದುಷ್ಟರು ತಮ್ಮನ್ನು ಹೆಚ್ಚಿಸಿಕೊಳ್ಳದಂತೆ, ಅವರ ಆಶೆಗಳನ್ನು ನೆರವೇರಿಸಬೇಡ, ಅವರ ಕುಯುಕ್ತಿಯನ್ನು ಸಾಗಗೊಡಿಸಬೇಡ” ಎಂದು ಹೇಳುತ್ತೇನೆ. ಸೆಲಾ
9ನನ್ನನ್ನು ಸುತ್ತಿಕೊಂಡಿರುವವರ ತುಟಿಗಳ ಕೇಡು ಅವರ ತಲೆಯ ಮೇಲೆಯೇ ಬರಲಿ,
10ಅವರ ಮೇಲೆ ಕೆಂಡಗಳು ಸುರಿಯಲಿ, ಅವರು ಅಗ್ನಿಕುಂಡದೊಳಕ್ಕೂ, ಆಳವಾದ ತಗ್ಗಿನೊಳಕ್ಕೂ ದೊಬ್ಬಲ್ಪಟ್ಟು ತಿರುಗಿ ಏಳದಿರಲಿ.

Read ಕೀರ್ತ 140ಕೀರ್ತ 140
Compare ಕೀರ್ತ 140:4-10ಕೀರ್ತ 140:4-10