Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 141

ಕೀರ್ತ 141:3-7

Help us?
Click on verse(s) to share them!
3ಯೆಹೋವನೇ, ನನ್ನ ಬಾಯಿಗೆ ಕಾವಲಿರಿಸು, ನನ್ನ ತುಟಿಗಳೆಂಬ ಕದವನ್ನು ಕಾಯಿ.
4ನನ್ನ ಹೃದಯವು ದುರಾಚಾರವನ್ನು ಮೆಚ್ಚದಂತೆಯೂ, ನಾನು ದುಷ್ಟರೊಡನೆ ಸೇರಿ ಕೆಟ್ಟ ಕೆಲಸಗಳನ್ನು ನಡೆಸದಂತೆಯೂ ನನ್ನನ್ನು ಕಾಪಾಡು. ಅವರ ಮೃಷ್ಟಾನ್ನವು ನನಗೆ ಬೇಡವೇ ಬೇಡ.
5ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ, ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ, ನನ್ನ ತಲೆಯು ಅದನ್ನು ಬೇಡವೆನ್ನದಿರಲಿ. ಆದರೆ ದುಷ್ಟರ ಕೆಟ್ಟತನಕ್ಕೆ ವಿರುದ್ಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು.
6ಅವರ ಪ್ರಮುಖರು ಕಡುಬಂಡೆಯಿಂದ ಕೆಳಕ್ಕೆ ದೊಬ್ಬಲ್ಪಟ್ಟ ಮೇಲೆ, ಜನರು ನನ್ನ ಮಾತುಗಳಿಗೆ ಕಿವಿಗೊಡುವರು, ಅವು ಅವರಿಗೆ ಹಿತವಾಗಿರುವವು.
7ಒಬ್ಬನು ಹೊಲವನ್ನು ಉಳುತ್ತಾ, ಹೆಂಟೆಗಳನ್ನು ಒಡೆದು ಚದರಿಸುವ ಪ್ರಕಾರವೇ, ನಮ್ಮ ಎಲುಬುಗಳು ಪಾತಾಳದ್ವಾರದಲ್ಲಿ ಚದರಿಸಲ್ಪಟ್ಟಿರುತ್ತವೆ.

Read ಕೀರ್ತ 141ಕೀರ್ತ 141
Compare ಕೀರ್ತ 141:3-7ಕೀರ್ತ 141:3-7