Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 142

ಕೀರ್ತ 142:1-6

Help us?
Click on verse(s) to share them!
1ದಾವೀದನ ಪದ್ಯ, ಅವನು ಗುಹೆಯಲ್ಲಿ ಅಡಗಿಕೊಂಡಿದ್ದಾಗ ಮಾಡಿದ ಪ್ರಾರ್ಥನೆ. ನಾನು ಯೆಹೋವನಿಗೆ ಮೊರೆಯಿಡುವೆನು, ಯೆಹೋವನಿಗೆ ಕೂಗಿ ಬಿನ್ನೈಸುವೆನು.
2ನನ್ನ ಚಿಂತೆಗಳನ್ನು ಆತನ ಮುಂದೆ ಬಿಚ್ಚುವೆನು, ನನ್ನ ಕಷ್ಟವನ್ನು ಆತನಿಗೆ ಅರಿಕೆಮಾಡುವೆನು.
3ನನ್ನ ಆತ್ಮವು ಕುಂದಿಹೋದಾಗ, ನೀನು ನನ್ನ ಮಾರ್ಗವನ್ನು ಬಲ್ಲವನಾಗಿರುತ್ತಿ, ನಾನು ಹೋಗಬೇಕಾದ ದಾರಿಯಲ್ಲಿ ಅವರು ಉರುಲನ್ನೊಡ್ಡಿದ್ದಾರೆ.
4ನಾನು ನನ್ನ ಬಲಗಡೆಗೆ ನೋಡಲು, ಅಲ್ಲಿ ಸಹಾಯಕರು ಯಾರೂ ಇಲ್ಲ, ಆಶ್ರಯವೂ ನಾಶವಾಯಿತು, ನನ್ನ ಪ್ರಾಣಕ್ಕೆ ಹಿತಚಿಂತಕರು ಒಬ್ಬರೂ ಇಲ್ಲ.
5ಯೆಹೋವನೇ, ನಾನು ನಿನಗೆ, “ನೀನೇ ನನ್ನ ಶರಣನೂ, ಜೀವಲೋಕದಲ್ಲಿ ನನ್ನ ಪಾಲೂ ಆಗಿದ್ದಿ” ಎಂದು ಕೂಗಿ ಮೊರೆಯಿಟ್ಟಿದ್ದೇನೆ.
6ನನ್ನ ಕೂಗನ್ನು ಲಾಲಿಸು, ಬಲು ಕುಗ್ಗಿಹೋಗಿದ್ದೇನೆ. ಹಿಂಸಕರ ಕೈಯಿಂದ ನನ್ನನ್ನು ತಪ್ಪಿಸು, ಅವರು ನನಗಿಂತ ಬಲಿಷ್ಠರಾಗಿದ್ದಾರಲ್ಲಾ.

Read ಕೀರ್ತ 142ಕೀರ್ತ 142
Compare ಕೀರ್ತ 142:1-6ಕೀರ್ತ 142:1-6