Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 143

ಕೀರ್ತ 143:1-4

Help us?
Click on verse(s) to share them!
1ದಾವೀದನ ಕೀರ್ತನೆ. ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲಿಸು; ನನ್ನ ಬಿನ್ನಹಕ್ಕೆ ಕಿವಿಗೊಡು; ನಿನ್ನ ನೀತಿ ಸತ್ಯತೆಗಳಿಗೆ ಅನುಸಾರವಾಗಿ ಸದುತ್ತರವನ್ನು ದಯಪಾಲಿಸು.
2ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ.
3ವೈರಿಯು ನನ್ನ ಪ್ರಾಣವನ್ನು ಹಿಂಸಿಸಿದ್ದಾನೆ; ಜೀವವನ್ನು ನೆಲಕ್ಕೆ ಹಾಕಿ ಜಜ್ಜಿದ್ದಾನೆ. ಕಾರ್ಗತ್ತಲೆಯಲ್ಲಿ ನನ್ನನ್ನು ಹಾಕಿದ್ದಾನೆ; ಬಹು ಕಾಲದಿಂದ ಸತ್ತವರಂತಿದ್ದೇನೆ.
4ನನ್ನ ಆತ್ಮವು ಕುಂದಿಹೋಗಿದೆ; ನನ್ನ ಮನಸ್ಸು ಬೆರಗಾಗಿದೆ.

Read ಕೀರ್ತ 143ಕೀರ್ತ 143
Compare ಕೀರ್ತ 143:1-4ಕೀರ್ತ 143:1-4