6ಕೈಚಾಚಿ ಬೇಡುತ್ತೇನೆ; ಒಣನೆಲವು ನೀರಿಗಾಗಿ ಹೇಗೋ, ಹಾಗೆಯೇ ನನ್ನ ಆತ್ಮವು ನಿನಗಾಗಿ ತವಕಪಡುತ್ತದೆ. ಸೆಲಾ
7ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು; ನನ್ನ ಆತ್ಮವು ಕುಂದಿಹೋಗಿದೆ. ನೀನು ವಿಮುಖನಾದರೆ ಸಮಾಧಿಯಲ್ಲಿ ಸೇರಿದವರಿಗೆ ನಾನು ಸಮಾನನಾಗಿರುವೆನು.
8ಹೊತ್ತಾರೆ ನಿನ್ನ ಕೃಪೆಯು ನನಗೆ ಪ್ರಕಟವಾಗಲಿ; ನಿನ್ನಲ್ಲಿ ಭರವಸವಿಟ್ಟಿದ್ದೇನಲ್ಲಾ. ನಾನು ನಡೆಯತಕ್ಕ ಮಾರ್ಗವನ್ನು ತಿಳಿಸು; ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ.