Text copied!
Bibles in Kannada

ಕೀರ್ತ 144:4-10 in Kannada

Help us?

ಕೀರ್ತ 144:4-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮನುಷ್ಯನು ಬರೀ ಉಸಿರೇ, ಅವನ ಜೀವಕಾಲವು ಬೇಗನೆ ಗತಿಸಿಹೋಗುವ ನೆರಳಿನಂತಿದೆ.
5 ಯೆಹೋವನೇ, ಆಕಾಶವನ್ನು ತಗ್ಗಿಸಿ ಇಳಿದು ಬಾ, ಪರ್ವತಗಳನ್ನು ಮುಟ್ಟು, ಆಗ ಅವು ಹೊಗೆಹಾಯುವವು.
6 ಸಿಡಿಲಿನಿಂದ ಶತ್ರುಗಳನ್ನು ಚದರಿಸಿಬಿಡು, ನಿನ್ನ ಬಾಣಗಳಿಂದ ಅವರನ್ನು ಭ್ರಾಂತಿಗೊಳಿಸು.
7 ಮೇಲಣ ಲೋಕದಿಂದ ಕೈಚಾಚಿ, ಮಹಾ ಜಲರಾಶಿಯೊಳಗಿಂದ ನನ್ನನ್ನು ಎಳೆದುಕೋ.
8 ಕಪಟವಚನದವರೂ, ಬಲಗೈಯೆತ್ತಿ ಸುಳ್ಳಾಣೆಯಿಡುವವರೂ ಆಗಿರುವ ಅನ್ಯಜನಗಳ ಕೈಯಿಂದ ನನ್ನನ್ನು ಬಿಡಿಸು.
9 ದೇವರೇ, ನಿನಗೆ ನೂತನ ಕೀರ್ತನೆಯನ್ನು ಹಾಡುವೆನು, ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು.
10 ಅರಸುಗಳಿಗೆ ಜಯಪ್ರದನೂ, ಸೇವಕನಾದ ದಾವೀದನನ್ನು ಹಾನಿಕರವಾದ ಕತ್ತಿಗೆ ತಪ್ಪಿಸಿದವನೂ ನೀನೇ.
ಕೀರ್ತ 144 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019