Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 144

ಕೀರ್ತ 144:9-14

Help us?
Click on verse(s) to share them!
9ದೇವರೇ, ನಿನಗೆ ನೂತನ ಕೀರ್ತನೆಯನ್ನು ಹಾಡುವೆನು, ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು.
10ಅರಸುಗಳಿಗೆ ಜಯಪ್ರದನೂ, ಸೇವಕನಾದ ದಾವೀದನನ್ನು ಹಾನಿಕರವಾದ ಕತ್ತಿಗೆ ತಪ್ಪಿಸಿದವನೂ ನೀನೇ.
11ಕಪಟವಚನದವರೂ, ಬಲಗೈಯೆತ್ತಿ ಸುಳ್ಳಾಣೆ ಇಡುವವರೂ ಆಗಿರುವ ಅನ್ಯಜನಗಳ ಕೈಯಿಂದ ನನ್ನನ್ನು ಬಿಡಿಸಿ ಕಾಪಾಡು.
12ಯೌವನಸ್ಥರಾದ ನಮ್ಮ ಗಂಡುಮಕ್ಕಳು ಸಮೃದ್ಧಿಯಾಗಿ ಬೆಳದಿರುವ ಸಸಿಗಳಂತಿರುವರು, ಹೆಣ್ಣುಮಕ್ಕಳು ಅರಮನೆಯಲ್ಲಿ ಕೆತ್ತಿದ ಮೂಲೆಗಂಬದಂತೆ ಇರುವರು.
13ನಮ್ಮ ಕಣಜಗಳು ಸಕಲವಿಧವಾದ ಧಾನ್ಯಗಳಿಂದ ತುಂಬಿರುವವು, ನಮ್ಮ ಹೊಲಗಳಲ್ಲಿರುವ ಕುರಿಗಳು ಸಾವಿರಾರು ಮರಿಗಳನ್ನು ಈಯುವವು.
14ನಮ್ಮ ಪಶುಗಳು ಅಸಂಖ್ಯಾತವಾಗಲಿ, ವೈರಿಗಳು ಒಳಗೆ ನುಗ್ಗುವುದಾಗಲಿ, ನಮ್ಮವರನ್ನು ಸೆರೆ ಒಯ್ಯುವುದಾಗಲಿ ಇರುವುದಿಲ್ಲ, ಬೀದಿಗಳಲ್ಲಿ ಗೋಳಾಟವು ಕೇಳಿಸುವುದಿಲ್ಲ.

Read ಕೀರ್ತ 144ಕೀರ್ತ 144
Compare ಕೀರ್ತ 144:9-14ಕೀರ್ತ 144:9-14