Text copied!
Bibles in Kannada

ಕೀರ್ತ 144:9-14 in Kannada

Help us?

ಕೀರ್ತ 144:9-14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೇವರೇ, ನಿನಗೆ ನೂತನ ಕೀರ್ತನೆಯನ್ನು ಹಾಡುವೆನು, ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು.
10 ಅರಸುಗಳಿಗೆ ಜಯಪ್ರದನೂ, ಸೇವಕನಾದ ದಾವೀದನನ್ನು ಹಾನಿಕರವಾದ ಕತ್ತಿಗೆ ತಪ್ಪಿಸಿದವನೂ ನೀನೇ.
11 ಕಪಟವಚನದವರೂ, ಬಲಗೈಯೆತ್ತಿ ಸುಳ್ಳಾಣೆ ಇಡುವವರೂ ಆಗಿರುವ ಅನ್ಯಜನಗಳ ಕೈಯಿಂದ ನನ್ನನ್ನು ಬಿಡಿಸಿ ಕಾಪಾಡು.
12 ಯೌವನಸ್ಥರಾದ ನಮ್ಮ ಗಂಡುಮಕ್ಕಳು ಸಮೃದ್ಧಿಯಾಗಿ ಬೆಳದಿರುವ ಸಸಿಗಳಂತಿರುವರು, ಹೆಣ್ಣುಮಕ್ಕಳು ಅರಮನೆಯಲ್ಲಿ ಕೆತ್ತಿದ ಮೂಲೆಗಂಬದಂತೆ ಇರುವರು.
13 ನಮ್ಮ ಕಣಜಗಳು ಸಕಲವಿಧವಾದ ಧಾನ್ಯಗಳಿಂದ ತುಂಬಿರುವವು, ನಮ್ಮ ಹೊಲಗಳಲ್ಲಿರುವ ಕುರಿಗಳು ಸಾವಿರಾರು ಮರಿಗಳನ್ನು ಈಯುವವು.
14 ನಮ್ಮ ಪಶುಗಳು ಅಸಂಖ್ಯಾತವಾಗಲಿ, ವೈರಿಗಳು ಒಳಗೆ ನುಗ್ಗುವುದಾಗಲಿ, ನಮ್ಮವರನ್ನು ಸೆರೆ ಒಯ್ಯುವುದಾಗಲಿ ಇರುವುದಿಲ್ಲ, ಬೀದಿಗಳಲ್ಲಿ ಗೋಳಾಟವು ಕೇಳಿಸುವುದಿಲ್ಲ.
ಕೀರ್ತ 144 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019