Text copied!
Bibles in Kannada

ಕೀರ್ತ 145:10-14 in Kannada

Help us?

ಕೀರ್ತ 145:10-14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನೇ, ನಿನ್ನ ಸೃಷ್ಟಿಯೆಲ್ಲವು ನಿನ್ನನ್ನು ಸ್ತುತಿಸುವುದು, ನಿನ್ನ ಭಕ್ತರು ನಿನ್ನನ್ನು ಕೊಂಡಾಡುವರು.
11 ಅವರು ನಿನ್ನ ರಾಜ್ಯಮಹತ್ತನ್ನು ಪ್ರಸಿದ್ಧಪಡಿಸುವರು, ನಿನ್ನ ಪ್ರತಾಪವನ್ನು ವರ್ಣಿಸುವರು.
12 ಹೀಗೆ ಮಾನವರು ನಿನ್ನ ಶೂರಕೃತ್ಯಗಳನ್ನೂ, ನಿನ್ನ ರಾಜ್ಯದ ಮಹಾಪ್ರಭಾವವನ್ನೂ ಗ್ರಹಿಸಿಕೊಳ್ಳುವರು.
13 ನಿನ್ನ ರಾಜ್ಯವು ಶಾಶ್ವತವಾಗಿದೆ, ನಿನ್ನ ಆಳ್ವಿಕೆಯು ತಲತಲಾಂತರಕ್ಕೂ ಇರುವುದು.
14 ಯೆಹೋವನು ಬಿದ್ದವರನ್ನೆಲ್ಲಾ ಎತ್ತುವವನೂ, ಕುಗ್ಗಿದವರನ್ನೆಲ್ಲಾ ಉದ್ಧರಿಸುವವನೂ ಆಗಿದ್ದಾನೆ.
ಕೀರ್ತ 145 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019