Text copied!
Bibles in Kannada

ಕೀರ್ತ 145:13-19 in Kannada

Help us?

ಕೀರ್ತ 145:13-19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿನ್ನ ರಾಜ್ಯವು ಶಾಶ್ವತವಾಗಿದೆ, ನಿನ್ನ ಆಳ್ವಿಕೆಯು ತಲತಲಾಂತರಕ್ಕೂ ಇರುವುದು.
14 ಯೆಹೋವನು ಬಿದ್ದವರನ್ನೆಲ್ಲಾ ಎತ್ತುವವನೂ, ಕುಗ್ಗಿದವರನ್ನೆಲ್ಲಾ ಉದ್ಧರಿಸುವವನೂ ಆಗಿದ್ದಾನೆ.
15 ಯೆಹೋವನೇ, ಎಲ್ಲಾ ಜೀವಿಗಳ ಕಣ್ಣುಗಳು ನಿನ್ನನ್ನೇ ನೋಡುತ್ತವೆ, ನೀನು ಅವುಗಳಿಗೆ ಹೊತ್ತುಹೊತ್ತಿಗೆ ಆಹಾರಕೊಡುತ್ತಿ.
16 ನೀನು ಕೈತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ನೆರವೇರಿಸುತ್ತಿ.
17 ಯೆಹೋವನ ಮಾರ್ಗಗಳೆಲ್ಲಾ ನೀತಿಯುಳ್ಳವುಗಳು, ಆತನು ಎಲ್ಲಾ ಕಾರ್ಯಗಳಲ್ಲಿ ಕೃಪೆ ತೋರಿಸುವವನು.
18 ಯೆಹೋವನಿಗೆ ಮೊರೆಯಿಡುವವರು, ಯಥಾರ್ಥವಾಗಿ ಮೊರೆಯಿಡುವುದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.
19 ತನ್ನಲ್ಲಿ ಭಯಭಕ್ತಿಯುಳ್ಳವರ ಇಷ್ಟವನ್ನು ನೆರವೇರಿಸುತ್ತಾನೆ, ಅವರ ಕೂಗನ್ನು ಕೇಳಿ ರಕ್ಷಿಸುತ್ತಾನೆ.
ಕೀರ್ತ 145 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019