Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 145

ಕೀರ್ತ 145:3-8

Help us?
Click on verse(s) to share them!
3ಯೆಹೋವನು ಮಹೋನ್ನತನೂ, ಮಹಾಸ್ತುತಿಪಾತ್ರನೂ ಆಗಿದ್ದಾನೆ, ಆತನ ಮಹತ್ತು ಅಪಾರವಾದದ್ದು.
4ಜನರು ವಂಶ ಪಾರಂಪರ್ಯವಾಗಿ ನಿನ್ನ ಕೃತ್ಯಗಳನ್ನು ಹೊಗಳುವರು, ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುವರು.
5ಅವರು ನಿನ್ನ ಮಹಾಪ್ರಭಾವಯುಕ್ತವಾದ ಮಹಿಮೆಯನ್ನು ಕೊಂಡಾಡುವರು, ನಿನ್ನ ಅದ್ಭುತಕಾರ್ಯಗಳನ್ನೂ ಧ್ಯಾನಿಸುವೆನು.
6ಮನುಷ್ಯರು ನಿನ್ನ ಭಯಂಕರ ಕೃತ್ಯಗಳಲ್ಲಿ ಕಂಡು ಬಂದ ಪ್ರತಾಪವನ್ನು ಕೊಂಡಾಡುವರು. ನಾನು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವೆನು.
7ಜನರು ನಿನ್ನ ಮಹೋಪಕಾರವನ್ನು ನೆನಪಿನಲ್ಲಿಟ್ಟುಕೊಂಡು ಪ್ರಕಟಿಸುವರು, ನಿನ್ನ ನೀತಿಯನ್ನು ಹೊಗಳುವರು.
8ಯೆಹೋವನು ದಯೆಯು, ಕನಿಕರವು ಉಳ್ಳವನು, ದೀರ್ಘಶಾಂತನು, ಪ್ರೀತಿಪೂರ್ಣನು ಆಗಿದ್ದಾನೆ.

Read ಕೀರ್ತ 145ಕೀರ್ತ 145
Compare ಕೀರ್ತ 145:3-8ಕೀರ್ತ 145:3-8