Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 145

ಕೀರ್ತ 145:5-18

Help us?
Click on verse(s) to share them!
5ಅವರು ನಿನ್ನ ಮಹಾಪ್ರಭಾವಯುಕ್ತವಾದ ಮಹಿಮೆಯನ್ನು ಕೊಂಡಾಡುವರು, ನಿನ್ನ ಅದ್ಭುತಕಾರ್ಯಗಳನ್ನೂ ಧ್ಯಾನಿಸುವೆನು.
6ಮನುಷ್ಯರು ನಿನ್ನ ಭಯಂಕರ ಕೃತ್ಯಗಳಲ್ಲಿ ಕಂಡು ಬಂದ ಪ್ರತಾಪವನ್ನು ಕೊಂಡಾಡುವರು. ನಾನು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವೆನು.
7ಜನರು ನಿನ್ನ ಮಹೋಪಕಾರವನ್ನು ನೆನಪಿನಲ್ಲಿಟ್ಟುಕೊಂಡು ಪ್ರಕಟಿಸುವರು, ನಿನ್ನ ನೀತಿಯನ್ನು ಹೊಗಳುವರು.
8ಯೆಹೋವನು ದಯೆಯು, ಕನಿಕರವು ಉಳ್ಳವನು, ದೀರ್ಘಶಾಂತನು, ಪ್ರೀತಿಪೂರ್ಣನು ಆಗಿದ್ದಾನೆ.
9ಯೆಹೋವನು ಸರ್ವೋಪಕಾರಿಯು, ತಾನು ನಿರ್ಮಿಸಿದವುಗಳನ್ನೆಲ್ಲಾ ಕರುಣಿಸುವಾತನೂ ಆಗಿದ್ದಾನೆ.
10ಯೆಹೋವನೇ, ನಿನ್ನ ಸೃಷ್ಟಿಯೆಲ್ಲವು ನಿನ್ನನ್ನು ಸ್ತುತಿಸುವುದು, ನಿನ್ನ ಭಕ್ತರು ನಿನ್ನನ್ನು ಕೊಂಡಾಡುವರು.
11ಅವರು ನಿನ್ನ ರಾಜ್ಯಮಹತ್ತನ್ನು ಪ್ರಸಿದ್ಧಪಡಿಸುವರು, ನಿನ್ನ ಪ್ರತಾಪವನ್ನು ವರ್ಣಿಸುವರು.
12ಹೀಗೆ ಮಾನವರು ನಿನ್ನ ಶೂರಕೃತ್ಯಗಳನ್ನೂ, ನಿನ್ನ ರಾಜ್ಯದ ಮಹಾಪ್ರಭಾವವನ್ನೂ ಗ್ರಹಿಸಿಕೊಳ್ಳುವರು.
13ನಿನ್ನ ರಾಜ್ಯವು ಶಾಶ್ವತವಾಗಿದೆ, ನಿನ್ನ ಆಳ್ವಿಕೆಯು ತಲತಲಾಂತರಕ್ಕೂ ಇರುವುದು.
14ಯೆಹೋವನು ಬಿದ್ದವರನ್ನೆಲ್ಲಾ ಎತ್ತುವವನೂ, ಕುಗ್ಗಿದವರನ್ನೆಲ್ಲಾ ಉದ್ಧರಿಸುವವನೂ ಆಗಿದ್ದಾನೆ.
15ಯೆಹೋವನೇ, ಎಲ್ಲಾ ಜೀವಿಗಳ ಕಣ್ಣುಗಳು ನಿನ್ನನ್ನೇ ನೋಡುತ್ತವೆ, ನೀನು ಅವುಗಳಿಗೆ ಹೊತ್ತುಹೊತ್ತಿಗೆ ಆಹಾರಕೊಡುತ್ತಿ.
16ನೀನು ಕೈತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ನೆರವೇರಿಸುತ್ತಿ.
17ಯೆಹೋವನ ಮಾರ್ಗಗಳೆಲ್ಲಾ ನೀತಿಯುಳ್ಳವುಗಳು, ಆತನು ಎಲ್ಲಾ ಕಾರ್ಯಗಳಲ್ಲಿ ಕೃಪೆ ತೋರಿಸುವವನು.
18ಯೆಹೋವನಿಗೆ ಮೊರೆಯಿಡುವವರು, ಯಥಾರ್ಥವಾಗಿ ಮೊರೆಯಿಡುವುದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.

Read ಕೀರ್ತ 145ಕೀರ್ತ 145
Compare ಕೀರ್ತ 145:5-18ಕೀರ್ತ 145:5-18