Text copied!
Bibles in Kannada

ಕೀರ್ತ 145:7-12 in Kannada

Help us?

ಕೀರ್ತ 145:7-12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಜನರು ನಿನ್ನ ಮಹೋಪಕಾರವನ್ನು ನೆನಪಿನಲ್ಲಿಟ್ಟುಕೊಂಡು ಪ್ರಕಟಿಸುವರು, ನಿನ್ನ ನೀತಿಯನ್ನು ಹೊಗಳುವರು.
8 ಯೆಹೋವನು ದಯೆಯು, ಕನಿಕರವು ಉಳ್ಳವನು, ದೀರ್ಘಶಾಂತನು, ಪ್ರೀತಿಪೂರ್ಣನು ಆಗಿದ್ದಾನೆ.
9 ಯೆಹೋವನು ಸರ್ವೋಪಕಾರಿಯು, ತಾನು ನಿರ್ಮಿಸಿದವುಗಳನ್ನೆಲ್ಲಾ ಕರುಣಿಸುವಾತನೂ ಆಗಿದ್ದಾನೆ.
10 ಯೆಹೋವನೇ, ನಿನ್ನ ಸೃಷ್ಟಿಯೆಲ್ಲವು ನಿನ್ನನ್ನು ಸ್ತುತಿಸುವುದು, ನಿನ್ನ ಭಕ್ತರು ನಿನ್ನನ್ನು ಕೊಂಡಾಡುವರು.
11 ಅವರು ನಿನ್ನ ರಾಜ್ಯಮಹತ್ತನ್ನು ಪ್ರಸಿದ್ಧಪಡಿಸುವರು, ನಿನ್ನ ಪ್ರತಾಪವನ್ನು ವರ್ಣಿಸುವರು.
12 ಹೀಗೆ ಮಾನವರು ನಿನ್ನ ಶೂರಕೃತ್ಯಗಳನ್ನೂ, ನಿನ್ನ ರಾಜ್ಯದ ಮಹಾಪ್ರಭಾವವನ್ನೂ ಗ್ರಹಿಸಿಕೊಳ್ಳುವರು.
ಕೀರ್ತ 145 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019