8ಯೆಹೋವನು ದಯೆಯು, ಕನಿಕರವು ಉಳ್ಳವನು, ದೀರ್ಘಶಾಂತನು, ಪ್ರೀತಿಪೂರ್ಣನು ಆಗಿದ್ದಾನೆ.
9ಯೆಹೋವನು ಸರ್ವೋಪಕಾರಿಯು, ತಾನು ನಿರ್ಮಿಸಿದವುಗಳನ್ನೆಲ್ಲಾ ಕರುಣಿಸುವಾತನೂ ಆಗಿದ್ದಾನೆ.
10ಯೆಹೋವನೇ, ನಿನ್ನ ಸೃಷ್ಟಿಯೆಲ್ಲವು ನಿನ್ನನ್ನು ಸ್ತುತಿಸುವುದು, ನಿನ್ನ ಭಕ್ತರು ನಿನ್ನನ್ನು ಕೊಂಡಾಡುವರು.
11ಅವರು ನಿನ್ನ ರಾಜ್ಯಮಹತ್ತನ್ನು ಪ್ರಸಿದ್ಧಪಡಿಸುವರು, ನಿನ್ನ ಪ್ರತಾಪವನ್ನು ವರ್ಣಿಸುವರು.
12ಹೀಗೆ ಮಾನವರು ನಿನ್ನ ಶೂರಕೃತ್ಯಗಳನ್ನೂ, ನಿನ್ನ ರಾಜ್ಯದ ಮಹಾಪ್ರಭಾವವನ್ನೂ ಗ್ರಹಿಸಿಕೊಳ್ಳುವರು.
13ನಿನ್ನ ರಾಜ್ಯವು ಶಾಶ್ವತವಾಗಿದೆ, ನಿನ್ನ ಆಳ್ವಿಕೆಯು ತಲತಲಾಂತರಕ್ಕೂ ಇರುವುದು.