4ಉಸಿರು ಹೋಗಲು ಅವರು ಮಣ್ಣಿಗೆ ಸೇರುತ್ತಾರೆ, ಅವರ ಸಂಕಲ್ಪಗಳೆಲ್ಲಾ ಅದೇ ದಿನದಲ್ಲಿ ಹಾಳಾಗುವುದು.
5ಯಾರಿಗೆ ಯಾಕೋಬನ ದೇವರು ಸಹಾಯಕನೋ, ಯಾರು ತನ್ನ ದೇವರಾದ ಯೆಹೋವನನ್ನು ನಂಬಿರುತ್ತಾನೋ, ಅವನೇ ಧನ್ಯನು.
6ಭೂಮಿ, ಆಕಾಶ, ಸಾಗರ, ಜಲಚರ ಇವುಗಳನ್ನು ನಿರ್ಮಿಸಿದವನೂ, ವಾಗ್ದಾನವನ್ನು ಯಾವಾಗಲೂ ನೆರವೇರಿಸುವವನೂ,
7ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ, ಹಸಿದವರಿಗೆ ಆಹಾರ ಕೊಡುವವನೂ ಆತನೇ. ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುತ್ತಾನೆ.