7ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ, ಹಸಿದವರಿಗೆ ಆಹಾರ ಕೊಡುವವನೂ ಆತನೇ. ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುತ್ತಾನೆ.
8ಯೆಹೋವನು ಕುರುಡರಿಗೆ ಕಣ್ಣು ಕೊಡುತ್ತಾನೆ. ಯೆಹೋವನು ಕುಗ್ಗಿದವರನ್ನು ಉದ್ಧರಿಸುತ್ತಾನೆ. ಯೆಹೋವನು ನೀತಿವಂತರನ್ನು ಪ್ರೀತಿಸುತ್ತಾನೆ.
9ಯೆಹೋವನು ಪರದೇಶದವರನ್ನು ಕಾಪಾಡುತ್ತಾನೆ. ಆತನು ಅನಾಥರಿಗೂ, ವಿಧವೆಯರಿಗೂ ಆಧಾರವಾಗಿದ್ದಾನೆ. ಆದರೆ ದುಷ್ಟರ ಮಾರ್ಗವನ್ನು ಡೊಂಕು ಮಾಡುತ್ತಾನೆ.
10ಯೆಹೋವನು ಸದಾಕಾಲವೂ ಅರಸನಾಗಿರುವನು, ಚೀಯೋನೇ, ನಿನ್ನ ದೇವರು ತಲತಲಾಂತರಕ್ಕೂ ಆಳುವನು, ಯೆಹೋವನಿಗೆ ಸ್ತೋತ್ರ!