Text copied!
Bibles in Kannada

ಕೀರ್ತ 146:8-10 in Kannada

Help us?

ಕೀರ್ತ 146:8-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ಕುರುಡರಿಗೆ ಕಣ್ಣು ಕೊಡುತ್ತಾನೆ. ಯೆಹೋವನು ಕುಗ್ಗಿದವರನ್ನು ಉದ್ಧರಿಸುತ್ತಾನೆ. ಯೆಹೋವನು ನೀತಿವಂತರನ್ನು ಪ್ರೀತಿಸುತ್ತಾನೆ.
9 ಯೆಹೋವನು ಪರದೇಶದವರನ್ನು ಕಾಪಾಡುತ್ತಾನೆ. ಆತನು ಅನಾಥರಿಗೂ, ವಿಧವೆಯರಿಗೂ ಆಧಾರವಾಗಿದ್ದಾನೆ. ಆದರೆ ದುಷ್ಟರ ಮಾರ್ಗವನ್ನು ಡೊಂಕು ಮಾಡುತ್ತಾನೆ.
10 ಯೆಹೋವನು ಸದಾಕಾಲವೂ ಅರಸನಾಗಿರುವನು, ಚೀಯೋನೇ, ನಿನ್ನ ದೇವರು ತಲತಲಾಂತರಕ್ಕೂ ಆಳುವನು, ಯೆಹೋವನಿಗೆ ಸ್ತೋತ್ರ!
ಕೀರ್ತ 146 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019