Text copied!
Bibles in Kannada

ಕೀರ್ತ 147:1-7 in Kannada

Help us?

ಕೀರ್ತ 147:1-7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನಿಗೆ ಸ್ತೋತ್ರ! ನಮ್ಮ ದೇವರನ್ನು ಸ್ತುತಿಸುವುದು ಒಳ್ಳೆಯದೂ, ಸಂತೋಷಕರವೂ ಆಗಿದೆ, ಆತನನ್ನು ಕೀರ್ತಿಸುವುದು ಯುಕ್ತವಾಗಿದೆ.
2 ಯೆಹೋವನು ಯೆರೂಸಲೇಮನ್ನು ಕಟ್ಟಿಸುತ್ತಿದ್ದಾನೆ, ಚದರಿಹೋಗಿದ್ದ ಇಸ್ರಾಯೇಲರನ್ನು ಕೂಡಿಸುತ್ತಿದ್ದಾನೆ,
3 ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ, ಅವರ ಗಾಯಗಳನ್ನು ಕಟ್ಟುತ್ತಾನೆ.
4 ಅವನು ನಕ್ಷತ್ರಗಳ ಸಂಖ್ಯೆಯನ್ನು ಗೊತ್ತುಮಾಡಿ, ಪ್ರತಿಯೊಂದಕ್ಕೂ ಹೆಸರಿಟ್ಟಿದ್ದಾನೆ.
5 ನಮ್ಮ ಕರ್ತನು ದೊಡ್ಡವನೂ, ಪರಾಕ್ರಮಿಯೂ ಆಗಿದ್ದಾನೆ, ಆತನ ಜ್ಞಾನವು ಅಪರಿಮಿತವಾಗಿದೆ.
6 ಯೆಹೋವನು ದೀನರಿಗೆ ಆಧಾರವಾಗಿದ್ದಾನೆ, ದುಷ್ಟರನ್ನು ನೆಲಕ್ಕೆ ಹಾಕಿ ತುಳಿದುಬಿಡುತ್ತಾನೆ.
7 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಕಿನ್ನರಿಯೊಡನೆ ನಮ್ಮ ದೇವರನ್ನು ಕೊಂಡಾಡಿರಿ.
ಕೀರ್ತ 147 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019