13ಆತನು ನಿನ್ನ ಹೆಬ್ಬಾಗಿಲುಗಳ ಅಗುಳಿಗಳನ್ನು ಬಲಪಡಿಸಿದ್ದಾನೆ, ನಿನ್ನ ಮಕ್ಕಳನ್ನು ಆಶೀರ್ವದಿಸಿದ್ದಾನೆ.
14ಆತನು ನಿನ್ನ ಪ್ರಾಂತ್ಯದೊಳಗೆ ಸೌಭಾಗ್ಯವನ್ನು ಉಂಟುಮಾಡುತ್ತಾನೆ, ಶ್ರೇಷ್ಠವಾದ ಗೋದಿಯಿಂದ ನಿನ್ನನ್ನು ತೃಪ್ತಿಗೊಳಿಸುತ್ತಾನೆ.
15ತನ್ನ ನುಡಿಯನ್ನು ಭೂಲೋಕಕ್ಕೆ ಕಳುಹಿಸುತ್ತಾನೆ, ಆತನ ವಾಕ್ಯವು ಬಹು ವೇಗಶಾಲಿಯಾಗಿದೆ.
16ಉಣ್ಣೆಯಂತಿರುವ ಹಿಮವನ್ನು ಬೀಳಿಸುತ್ತಾನೆ, ಇಬ್ಬನಿಯನ್ನು ಬೂದಿಯಂತೆ ಹರವುತ್ತಾನೆ.
17ರೊಟ್ಟಿ ತುಂಡುಗಳಂತಿರುವ ಆನೆಕಲ್ಲುಗಳನ್ನು ಸುರಿಸುತ್ತಾನೆ, ಆತನು ಚಳಿಯನ್ನು ಬರಮಾಡಲು ಅದನ್ನು ಸಹಿಸುವವರು ಯಾರು?
18ಆತನು ಅಪ್ಪಣೆಕೊಡಲು ಅವು ಕರಗುತ್ತವೆ, ತನ್ನ ಗಾಳಿಯನ್ನು ಬೀಸಮಾಡಲು ನೀರು ಹರಿಯುತ್ತದೆ.