Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 147

ಕೀರ್ತ 147:2-9

Help us?
Click on verse(s) to share them!
2ಯೆಹೋವನು ಯೆರೂಸಲೇಮನ್ನು ಕಟ್ಟಿಸುತ್ತಿದ್ದಾನೆ, ಚದರಿಹೋಗಿದ್ದ ಇಸ್ರಾಯೇಲರನ್ನು ಕೂಡಿಸುತ್ತಿದ್ದಾನೆ,
3ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ, ಅವರ ಗಾಯಗಳನ್ನು ಕಟ್ಟುತ್ತಾನೆ.
4ಅವನು ನಕ್ಷತ್ರಗಳ ಸಂಖ್ಯೆಯನ್ನು ಗೊತ್ತುಮಾಡಿ, ಪ್ರತಿಯೊಂದಕ್ಕೂ ಹೆಸರಿಟ್ಟಿದ್ದಾನೆ.
5ನಮ್ಮ ಕರ್ತನು ದೊಡ್ಡವನೂ, ಪರಾಕ್ರಮಿಯೂ ಆಗಿದ್ದಾನೆ, ಆತನ ಜ್ಞಾನವು ಅಪರಿಮಿತವಾಗಿದೆ.
6ಯೆಹೋವನು ದೀನರಿಗೆ ಆಧಾರವಾಗಿದ್ದಾನೆ, ದುಷ್ಟರನ್ನು ನೆಲಕ್ಕೆ ಹಾಕಿ ತುಳಿದುಬಿಡುತ್ತಾನೆ.
7ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಕಿನ್ನರಿಯೊಡನೆ ನಮ್ಮ ದೇವರನ್ನು ಕೊಂಡಾಡಿರಿ.
8ಆತನು ಆಕಾಶದಲ್ಲಿ ಮೋಡಗಳನ್ನು ಕವಿಸುತ್ತಾನೆ, ಭೂಮಿಗೋಸ್ಕರ ಮಳೆಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ.
9ಆತನು ಪಶುಗಳಿಗೂ, ಕೂಗುತ್ತಿರುವ ಕಾಗೆಮರಿಗಳಿಗೂ ಬೇಕಾದ ಆಹಾರಕೊಡುತ್ತಾನೆ.

Read ಕೀರ್ತ 147ಕೀರ್ತ 147
Compare ಕೀರ್ತ 147:2-9ಕೀರ್ತ 147:2-9