Text copied!
Bibles in Kannada

ಕೀರ್ತ 147:8-18 in Kannada

Help us?

ಕೀರ್ತ 147:8-18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆತನು ಆಕಾಶದಲ್ಲಿ ಮೋಡಗಳನ್ನು ಕವಿಸುತ್ತಾನೆ, ಭೂಮಿಗೋಸ್ಕರ ಮಳೆಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ.
9 ಆತನು ಪಶುಗಳಿಗೂ, ಕೂಗುತ್ತಿರುವ ಕಾಗೆಮರಿಗಳಿಗೂ ಬೇಕಾದ ಆಹಾರಕೊಡುತ್ತಾನೆ.
10 ಕುದುರೆಯ ಶಕ್ತಿಯಲ್ಲಿ ಆತನಿಗೆ ಇಷ್ಟವಿಲ್ಲ, ಆಳಿನ ತೊಡೆಯ ಬಲವನ್ನು ಆತನು ಮೆಚ್ಚುವುದಿಲ್ಲ.
11 ಯೆಹೋವನು ಆನಂದಿಸುವುದು ತನ್ನ ಕೃಪೆಯನ್ನು ನಿರೀಕ್ಷಿಸುವ ಭಕ್ತರಲ್ಲೇ.
12 ಯೆರೂಸಲೇಮೇ, ಯೆಹೋವನನ್ನು ಕೀರ್ತಿಸು, ಚೀಯೋನೇ, ನಿನ್ನ ದೇವರನ್ನು ಸ್ತುತಿಸು.
13 ಆತನು ನಿನ್ನ ಹೆಬ್ಬಾಗಿಲುಗಳ ಅಗುಳಿಗಳನ್ನು ಬಲಪಡಿಸಿದ್ದಾನೆ, ನಿನ್ನ ಮಕ್ಕಳನ್ನು ಆಶೀರ್ವದಿಸಿದ್ದಾನೆ.
14 ಆತನು ನಿನ್ನ ಪ್ರಾಂತ್ಯದೊಳಗೆ ಸೌಭಾಗ್ಯವನ್ನು ಉಂಟುಮಾಡುತ್ತಾನೆ, ಶ್ರೇಷ್ಠವಾದ ಗೋದಿಯಿಂದ ನಿನ್ನನ್ನು ತೃಪ್ತಿಗೊಳಿಸುತ್ತಾನೆ.
15 ತನ್ನ ನುಡಿಯನ್ನು ಭೂಲೋಕಕ್ಕೆ ಕಳುಹಿಸುತ್ತಾನೆ, ಆತನ ವಾಕ್ಯವು ಬಹು ವೇಗಶಾಲಿಯಾಗಿದೆ.
16 ಉಣ್ಣೆಯಂತಿರುವ ಹಿಮವನ್ನು ಬೀಳಿಸುತ್ತಾನೆ, ಇಬ್ಬನಿಯನ್ನು ಬೂದಿಯಂತೆ ಹರವುತ್ತಾನೆ.
17 ರೊಟ್ಟಿ ತುಂಡುಗಳಂತಿರುವ ಆನೆಕಲ್ಲುಗಳನ್ನು ಸುರಿಸುತ್ತಾನೆ, ಆತನು ಚಳಿಯನ್ನು ಬರಮಾಡಲು ಅದನ್ನು ಸಹಿಸುವವರು ಯಾರು?
18 ಆತನು ಅಪ್ಪಣೆಕೊಡಲು ಅವು ಕರಗುತ್ತವೆ, ತನ್ನ ಗಾಳಿಯನ್ನು ಬೀಸಮಾಡಲು ನೀರು ಹರಿಯುತ್ತದೆ.
ಕೀರ್ತ 147 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019