Text copied!
Bibles in Kannada

ಕೀರ್ತ 16:1-8 in Kannada

Help us?

ಕೀರ್ತ 16:1-8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾವೀದನ ಕಾವ್ಯ. ದೇವರೇ, ನಾನು ನಿನ್ನ ಶರಣಾಗತನು; ನನ್ನನ್ನು ಕಾಪಾಡು.
2 ನಾನು ಯೆಹೋವನನ್ನು ಕುರಿತು, “ನೀನೇ ನನ್ನ ಒಡೆಯನು; ನನ್ನ ಸುಖವು ನಿನ್ನಲ್ಲಿಯೇ ಹೊರತು ಬೇರೆ ಇಲ್ಲ” ಎಂದು ಹೇಳುವೆನು.
3 ಭೂಲೋಕದಲ್ಲಿರುವ ದೇವಜನರ ವಿಷಯದಲ್ಲಿ, “ಇವರೇ ಶ್ರೇಷ್ಠರು, ಇವರೇ ನನಗೆ ಇಷ್ಟರಾದವರು” ಎಂದು ಹೇಳುವೆನು.
4 ಇತರ ದೇವರುಗಳನ್ನು ಅವಲಂಬಿಸಿದವರಿಗೆ ಬಹಳ ಕಷ್ಟನಷ್ಟಗಳು ಉಂಟಾಗುವವು. ಅವರಂತೆ ನಾನು ರಕ್ತವನ್ನು ಪಾನದ್ರವ್ಯವಾಗಿ ಸಮರ್ಪಿಸುವುದೇ ಇಲ್ಲ; ಅವರ ನಾಮಗಳನ್ನಾದರೂ ಉಚ್ಚರಿಸುವುದಿಲ್ಲ.
5 ನನ್ನ ಪಾಲೂ, ನನ್ನ ಪಾನವೂ ಯೆಹೋವನೇ, ನೀನೇ ನನ್ನ ಸ್ವತ್ತನ್ನು ಭದ್ರಗೊಳಿಸುತ್ತೀ.
6 ನನಗೆ ಪ್ರಾಪ್ತವಾಗಿರುವ ಸ್ವತ್ತು ರಮಣೀಯವಾದದ್ದು; ಅದು ನನಗೆ ಸಂತೃಪ್ತಿಕರವಾಗಿದೆ.
7 ಯೆಹೋವನು ನನಗೆ ಆಲೋಚನೆಯನ್ನು ಹೇಳಿಕೊಡುತ್ತಾನೆ; ನಾನು ಆತನನ್ನು ಕೊಂಡಾಡುವೆನು. ರಾತ್ರಿಯ ಸಮಯಗಳಲ್ಲಿ ನನ್ನ ಅಂತರಾತ್ಮವು ನನ್ನನ್ನು ಬೋಧಿಸುತ್ತದೆ.
8 ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲುವುದಿಲ್ಲ.
ಕೀರ್ತ 16 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019