2ನಿನ್ನಿಂದ ನನಗೆ ನ್ಯಾಯವಾದ ತೀರ್ಪು ಉಂಟಾಗಲಿ; ನೀನು ನೀತಿಗನುಸಾರವಾಗಿ ನೋಡುವವನಲ್ಲವೇ.
3ನೀನು ನನ್ನ ಹೃದಯವನ್ನು ಪರೀಕ್ಷಿಸಿದರೂ, ರಾತ್ರಿಯ ವೇಳೆ ವಿಚಾರಿಸಿದರೂ, ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದರೂ, ಯಾವ ದುರಾಲೋಚನೆಯಾದರೂ ನನ್ನಲ್ಲಿ ದೊರೆಯುವುದಿಲ್ಲ; ನನ್ನ ಬಾಯಿ ಮಾತುಗಳಲ್ಲಿ ತಪ್ಪುವುದಿಲ್ಲ ಎಂದು ತೀರ್ಮಾನಿಸಿದ್ದೇನೆ.
4ನಾನಂತೂ ಲೋಕವ್ಯವಹಾರಗಳಲ್ಲಿ ಬಲಾತ್ಕಾರಿಗಳಂತೆ ನಡೆಯದೆ ನಿನ್ನ ಮಾತನ್ನೇ ಅನುಸರಿಸಿದ್ದೇನೆ.
5ನಿನ್ನ ಮಾರ್ಗದಲ್ಲೇ ಹೆಜ್ಜೆಯಿಟ್ಟು ನಡೆಯುತ್ತಾ ಇದ್ದೇನೆ; ನನ್ನ ಕಾಲು ಜಾರಲಿಲ್ಲ.
6ದೇವರೇ, ನನಗೆ ಸದುತ್ತರವನ್ನು ದಯಪಾಲಿಸುವಿಯೆಂದು ಮೊರೆಯಿಡುತ್ತೇನೆ, ಕಿವಿಗೊಟ್ಟು ಕೇಳು.