Text copied!
Bibles in Kannada

ಕೀರ್ತ 17:4-13 in Kannada

Help us?

ಕೀರ್ತ 17:4-13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನಂತೂ ಲೋಕವ್ಯವಹಾರಗಳಲ್ಲಿ ಬಲಾತ್ಕಾರಿಗಳಂತೆ ನಡೆಯದೆ ನಿನ್ನ ಮಾತನ್ನೇ ಅನುಸರಿಸಿದ್ದೇನೆ.
5 ನಿನ್ನ ಮಾರ್ಗದಲ್ಲೇ ಹೆಜ್ಜೆಯಿಟ್ಟು ನಡೆಯುತ್ತಾ ಇದ್ದೇನೆ; ನನ್ನ ಕಾಲು ಜಾರಲಿಲ್ಲ.
6 ದೇವರೇ, ನನಗೆ ಸದುತ್ತರವನ್ನು ದಯಪಾಲಿಸುವಿಯೆಂದು ಮೊರೆಯಿಡುತ್ತೇನೆ, ಕಿವಿಗೊಟ್ಟು ಕೇಳು.
7 ಭುಜಬಲವನ್ನು ಪ್ರಯೋಗಿಸಿ, ಶರಣಾಗತರನ್ನು ವಿರೋಧಿಗಳಿಂದ ರಕ್ಷಿಸುವಾತನೇ, ನಿನ್ನ ಪ್ರೀತಿಯನ್ನು ವಿಶೇಷವಾಗಿ ತೋರಿಸು.
8 ನನ್ನನ್ನು ಸುತ್ತಿಕೊಂಡು ಬಾಧಿಸುತ್ತಿರುವ ದುಷ್ಟರಿಂದಲೂ, ಪ್ರಾಣವೈರಿಗಳಿಂದಲೂ ತಪ್ಪಿಸಿದ್ದಿ.
9 ನಿನ್ನ ರೆಕ್ಕೆಗಳ ಮರೆಯಲ್ಲಿಟ್ಟುಕೊಂಡು ನನ್ನನ್ನು ದುಷ್ಟರಿಂದ ಕಾಯಿ; ಕಣ್ಣು ಗುಡ್ಡಿನಂತೆಯೇ ಕಾಪಾಡು.
10 ಅವರು ತಮ್ಮ ಹೃದಯವನ್ನು ಕಠಿಣಮಾಡಿದ್ದಾರೆ; ಅಹಂಕಾರದಿಂದ ಮಾತನಾಡುತ್ತಾರೆ.
11 ನಾವು ಎಲ್ಲಿ ಕಾಲಿಟ್ಟರೂ ಅಲ್ಲೆಲ್ಲಾ ನಮ್ಮನ್ನು ಸುತ್ತಿಕೊಳ್ಳುತ್ತಾರೆ; ನಮ್ಮನ್ನು ನೆಲಕ್ಕೆ ಬೀಳಿಸಬೇಕೆಂದು ಸಮಯನೋಡುತ್ತಾರೆ.
12 ನನ್ನ ಶತ್ರುವು ಸೀಳಿಬಿಡಲಾಶಿಸುವ ಸಿಂಹದಂತೆಯೂ, ಮರೆಯಲ್ಲಿ ಹೊಂಚುಹಾಕಿರುವ ಪ್ರಾಯದ ಸಿಂಹದಂತೆಯೂ ಇದ್ದಾನೆ.
13 ಯೆಹೋವನೇ, ನೀನು ಅವನಿಗೆ ಎದುರಾಗಿ ನಿಂತು ಅವನನ್ನು ಕೆಡವಿಬಿಡು; ನಿನ್ನ ಕತ್ತಿಯಿಂದ ನನ್ನ ಪ್ರಾಣವನ್ನು ದುಷ್ಟರಿಗೆ ತಪ್ಪಿಸಿ ಕಾಪಾಡು.
ಕೀರ್ತ 17 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019