Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 17

ಕೀರ್ತ 17:5-13

Help us?
Click on verse(s) to share them!
5ನಿನ್ನ ಮಾರ್ಗದಲ್ಲೇ ಹೆಜ್ಜೆಯಿಟ್ಟು ನಡೆಯುತ್ತಾ ಇದ್ದೇನೆ; ನನ್ನ ಕಾಲು ಜಾರಲಿಲ್ಲ.
6ದೇವರೇ, ನನಗೆ ಸದುತ್ತರವನ್ನು ದಯಪಾಲಿಸುವಿಯೆಂದು ಮೊರೆಯಿಡುತ್ತೇನೆ, ಕಿವಿಗೊಟ್ಟು ಕೇಳು.
7ಭುಜಬಲವನ್ನು ಪ್ರಯೋಗಿಸಿ, ಶರಣಾಗತರನ್ನು ವಿರೋಧಿಗಳಿಂದ ರಕ್ಷಿಸುವಾತನೇ, ನಿನ್ನ ಪ್ರೀತಿಯನ್ನು ವಿಶೇಷವಾಗಿ ತೋರಿಸು.
8ನನ್ನನ್ನು ಸುತ್ತಿಕೊಂಡು ಬಾಧಿಸುತ್ತಿರುವ ದುಷ್ಟರಿಂದಲೂ, ಪ್ರಾಣವೈರಿಗಳಿಂದಲೂ ತಪ್ಪಿಸಿದ್ದಿ.
9ನಿನ್ನ ರೆಕ್ಕೆಗಳ ಮರೆಯಲ್ಲಿಟ್ಟುಕೊಂಡು ನನ್ನನ್ನು ದುಷ್ಟರಿಂದ ಕಾಯಿ; ಕಣ್ಣು ಗುಡ್ಡಿನಂತೆಯೇ ಕಾಪಾಡು.
10ಅವರು ತಮ್ಮ ಹೃದಯವನ್ನು ಕಠಿಣಮಾಡಿದ್ದಾರೆ; ಅಹಂಕಾರದಿಂದ ಮಾತನಾಡುತ್ತಾರೆ.
11ನಾವು ಎಲ್ಲಿ ಕಾಲಿಟ್ಟರೂ ಅಲ್ಲೆಲ್ಲಾ ನಮ್ಮನ್ನು ಸುತ್ತಿಕೊಳ್ಳುತ್ತಾರೆ; ನಮ್ಮನ್ನು ನೆಲಕ್ಕೆ ಬೀಳಿಸಬೇಕೆಂದು ಸಮಯನೋಡುತ್ತಾರೆ.
12ನನ್ನ ಶತ್ರುವು ಸೀಳಿಬಿಡಲಾಶಿಸುವ ಸಿಂಹದಂತೆಯೂ, ಮರೆಯಲ್ಲಿ ಹೊಂಚುಹಾಕಿರುವ ಪ್ರಾಯದ ಸಿಂಹದಂತೆಯೂ ಇದ್ದಾನೆ.
13ಯೆಹೋವನೇ, ನೀನು ಅವನಿಗೆ ಎದುರಾಗಿ ನಿಂತು ಅವನನ್ನು ಕೆಡವಿಬಿಡು; ನಿನ್ನ ಕತ್ತಿಯಿಂದ ನನ್ನ ಪ್ರಾಣವನ್ನು ದುಷ್ಟರಿಗೆ ತಪ್ಪಿಸಿ ಕಾಪಾಡು.

Read ಕೀರ್ತ 17ಕೀರ್ತ 17
Compare ಕೀರ್ತ 17:5-13ಕೀರ್ತ 17:5-13