Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 18

ಕೀರ್ತ 18:1-12

Help us?
Click on verse(s) to share them!
1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಯೆಹೋವನ ಸೇವಕನಾದ ದಾವೀದನು ಸೌಲನಿಂದಲೂ, ಎಲ್ಲಾ ಶತ್ರುಗಳ ಕೈಯಿಂದಲೂ ತಪ್ಪಿಸಲ್ಪಟ್ಟಾಗ ಯೆಹೋವನ ಘನಕ್ಕಾಗಿ ಈ ಪದ್ಯವನ್ನು ರಚಿಸಿ ಹೇಳಿದನು. ನನ್ನ ಬಲವಾಗಿರುವ ಯೆಹೋವನೇ, ನಿನ್ನಲ್ಲಿಯೇ ಮಮತೆಯಿಡುತ್ತೇನೆ.
2ಯೆಹೋವನು ನನ್ನ ಬಂಡೆಯು, ನನ್ನ ಕೋಟೆಯು, ನನ್ನ ವಿಮೋಚಕನು, ನನ್ನ ದೇವರು, ನನ್ನ ಆಶ್ರಯಗಿರಿಯು, ನನ್ನ ಗುರಾಣಿಯು, ನನ್ನ ರಕ್ಷಣೆಯ ಕೊಂಬು ಮತ್ತು ನನ್ನ ದುರ್ಗವು ಆಗಿದ್ದಾನೆ.
3ಯೆಹೋವನು ಸ್ತೋತ್ರಕ್ಕೆ ಅರ್ಹನು; ನಾನು ಆತನಿಗೆ ಮೊರೆಯಿಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ.
4ಮೃತ್ಯುಪಾಶಗಳು ನನಗೆ ಸುತ್ತಿಕೊಂಡವು; ನಾಶಪ್ರವಾಹವು ನನ್ನನ್ನು ನಡುಗಿಸಿತು.
5ಪಾತಾಳಪಾಶಗಳು ನನ್ನನ್ನು ಆವರಿಸಿಕೊಂಡವು; ಮರಣಕರವಾದ ಉರುಲುಗಳು ನನ್ನೆದುರಿನಲ್ಲಿದ್ದವು.
6ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಶಬ್ದವನ್ನು ಕೇಳಿದನು; ನನ್ನ ಕೂಗು ಆತನಿಗೆ ಕೇಳಿಸಿತು.
7ಆಗ ಆತನಿಗೆ ಸಿಟ್ಟೇರಿದ್ದರಿಂದ, ಭೂಮಿಯು ಗಡಗಡನೆ ಕಂಪಿಸಿತು, ಪರ್ವತಗಳ ಬುಡಗಳು ನಡುಗಿ ಕದಲಿದವು.
8ಆತನ ಮೂಗಿನಿಂದ ಹೊಗೆಯು ಎದ್ದು; ಆತನ ಬಾಯಿಂದ ಅಗ್ನಿಜ್ವಾಲೆ ಹೊರಟು, ಸಿಕ್ಕಿದ್ದೆಲ್ಲವನ್ನು ದಹಿಸಿ ಕೆಂಡವನ್ನಾಗಿ ಮಾಡಿತು.
9ಆತನು ಆಕಾಶವನ್ನು ತಗ್ಗಿಸಿ ಇಳಿದು ಬಂದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು.
10ಕೆರೂಬಿವಾಹನನಾಗಿ ಹಾರಿ, ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಆತನು ಇಳಿದು ಬಂದನು.
11ಕತ್ತಲನ್ನು ತನ್ನ ಸುತ್ತಲು ಗುಡಾರದಂತೆ ಕವಿಸಿಕೊಂಡು, ಜಲಮಯವಾಗಿರುವ ನೀಲಮೇಘಗಳ ಮಧ್ಯದಲ್ಲಿ ಮರೆಯಾದನು.
12ಆತನ ಸನ್ನಿಧಿಯ ಪ್ರಕಾಶದಿಂದ ಕಲ್ಮಳೆಯೂ, ಉರಿಗೆಂಡಗಳೂ ಹೊರಟು, ಆತನ ಸುತ್ತಲಿದ್ದ ಕಪ್ಪು ಮೋಡಗಳನ್ನು ದಾಟಿ ಸುರಿದವು.

Read ಕೀರ್ತ 18ಕೀರ್ತ 18
Compare ಕೀರ್ತ 18:1-12ಕೀರ್ತ 18:1-12