Text copied!
Bibles in Kannada

ಕೀರ್ತ 18:10-14 in Kannada

Help us?

ಕೀರ್ತ 18:10-14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕೆರೂಬಿವಾಹನನಾಗಿ ಹಾರಿ, ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಆತನು ಇಳಿದು ಬಂದನು.
11 ಕತ್ತಲನ್ನು ತನ್ನ ಸುತ್ತಲು ಗುಡಾರದಂತೆ ಕವಿಸಿಕೊಂಡು, ಜಲಮಯವಾಗಿರುವ ನೀಲಮೇಘಗಳ ಮಧ್ಯದಲ್ಲಿ ಮರೆಯಾದನು.
12 ಆತನ ಸನ್ನಿಧಿಯ ಪ್ರಕಾಶದಿಂದ ಕಲ್ಮಳೆಯೂ, ಉರಿಗೆಂಡಗಳೂ ಹೊರಟು, ಆತನ ಸುತ್ತಲಿದ್ದ ಕಪ್ಪು ಮೋಡಗಳನ್ನು ದಾಟಿ ಸುರಿದವು.
13 ಯೆಹೋವನು ಆಕಾಶದಲ್ಲಿ ಗುಡುಗಿದನು; ಪರಾತ್ಪರನಾದ ದೇವರು ಧ್ವನಿಗೊಟ್ಟನು. ಕಲ್ಮಳೆಯೂ, ಉರಿಗೆಂಡಗಳೂ ಹೊರಟವು.
14 ಆತನು ಬಾಣಗಳನ್ನೆಸೆದು ಶತ್ರುಗಳನ್ನು ಚದರಿಸಿಬಿಟ್ಟನು; ಸಿಡಿಲುಗಳಿಂದ ಕಳವಳಗೊಳಿಸಿದನು.
ಕೀರ್ತ 18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019