Text copied!
Bibles in Kannada

ಕೀರ್ತ 18:17-24 in Kannada

Help us?

ಕೀರ್ತ 18:17-24 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನನಗಿಂತ ಬಲಿಷ್ಠರೂ, ಪುಷ್ಟರೂ ಆಗಿ ದ್ವೇಷಿಸುತ್ತಿದ್ದ ಶತ್ರುಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದನು.
18 ಅವರು ನನ್ನ ವಿಪತ್ಕಾಲದಲ್ಲಿ ನನ್ನ ಮೇಲೆ ಬಿದ್ದರು, ಆಗ ಯೆಹೋವನು ನನಗೆ ಉದ್ಧಾರಕನಾದನು.
19 ಆತನು ನನ್ನನ್ನು ಬಿಡಿಸಿ ವಿಶಾಲ ಸ್ಥಳದಲ್ಲಿ ಸೇರಿಸಿದನು; ನನ್ನನ್ನು ಮೆಚ್ಚಿ ರಕ್ಷಿಸಿದನು.
20 ಯೆಹೋವನು ನನ್ನ ನೀತಿಗೆ ಸರಿಯಾಗಿ ಮೇಲನ್ನು ಮಾಡಿದನು, ನನ್ನ ಕೈಗಳ ಶುದ್ಧತ್ವಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಟ್ಟನು.
21 ನಾನು ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ; ನನ್ನ ದೇವರನ್ನು ಬಿಟ್ಟು ದುಷ್ಟನಾಗಲಿಲ್ಲವಲ್ಲಾ.
22 ನಾನು ಆತನ ನೀತಿಯ ಆಜ್ಞೆಗಳನ್ನು ಯಾವಾಗಲೂ ನನ್ನ ಎದುರಿನಲ್ಲಿ ಇಟ್ಟುಕೊಂಡೆನು; ಆತನ ವಿಧಿಗಳನ್ನು ಅಲಕ್ಷ್ಯಮಾಡಲೇ ಇಲ್ಲ.
23 ನಾನು ಆತನ ದೃಷ್ಟಿಯಲ್ಲಿ ನಿರ್ದೋಷಿಯು; ಪಾಪದಲ್ಲಿ ಬೀಳದಂತೆ ಜಾಗರೂಕತೆಯಿಂದ ನಡೆದುಕೊಂಡೆನು.
24 ಆದುದರಿಂದ ನಾನು ನೀತಿವಂತನೂ, ನಿರಪರಾಧಿಯೂ ಎಂದು ನೋಡಿ, ಯೆಹೋವನು ತಕ್ಕ ಪ್ರತಿಫಲವನ್ನು ಕೊಟ್ಟನು.
ಕೀರ್ತ 18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019