Text copied!
Bibles in Kannada

ಕೀರ್ತ 18:22-28 in Kannada

Help us?

ಕೀರ್ತ 18:22-28 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಾನು ಆತನ ನೀತಿಯ ಆಜ್ಞೆಗಳನ್ನು ಯಾವಾಗಲೂ ನನ್ನ ಎದುರಿನಲ್ಲಿ ಇಟ್ಟುಕೊಂಡೆನು; ಆತನ ವಿಧಿಗಳನ್ನು ಅಲಕ್ಷ್ಯಮಾಡಲೇ ಇಲ್ಲ.
23 ನಾನು ಆತನ ದೃಷ್ಟಿಯಲ್ಲಿ ನಿರ್ದೋಷಿಯು; ಪಾಪದಲ್ಲಿ ಬೀಳದಂತೆ ಜಾಗರೂಕತೆಯಿಂದ ನಡೆದುಕೊಂಡೆನು.
24 ಆದುದರಿಂದ ನಾನು ನೀತಿವಂತನೂ, ನಿರಪರಾಧಿಯೂ ಎಂದು ನೋಡಿ, ಯೆಹೋವನು ತಕ್ಕ ಪ್ರತಿಫಲವನ್ನು ಕೊಟ್ಟನು.
25 ನೀನು ಕೃಪೆಯುಳ್ಳವನಿಗೆ ಕೃಪಾವಂತನೂ, ದೋಷವಿಲ್ಲದವನಿಗೆ ನಿರ್ದೋಷಿಯೂ,
26 ಶುದ್ಧನಿಗೆ ಪರಿಶುದ್ಧನೂ, ಮೂರ್ಖನಿಗೆ ವಕ್ರನೂ ಆಗಿರುವಿ.
27 ದೀನರನ್ನು ಉದ್ಧರಿಸುವವನೂ, ಗರ್ವದ ಕಣ್ಣುಳ್ಳವರನ್ನು ತಗ್ಗಿಸಿಬಿಡುವವನೂ ನೀನಲ್ಲವೋ?
28 ನೀನೇ ನನ್ನ ದೀಪವನ್ನು ಹೊತ್ತಿಸುವವನಲ್ಲವೇ; ನನ್ನ ದೇವರಾದ ಯೆಹೋವನು ನನಗೆ ಬೆಳಕನ್ನು ಕೊಟ್ಟು ಕತ್ತಲನ್ನು ಪರಿಹರಿಸುವವನು.
ಕೀರ್ತ 18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019