Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 18

ಕೀರ್ತ 18:26-39

Help us?
Click on verse(s) to share them!
26ಶುದ್ಧನಿಗೆ ಪರಿಶುದ್ಧನೂ, ಮೂರ್ಖನಿಗೆ ವಕ್ರನೂ ಆಗಿರುವಿ.
27ದೀನರನ್ನು ಉದ್ಧರಿಸುವವನೂ, ಗರ್ವದ ಕಣ್ಣುಳ್ಳವರನ್ನು ತಗ್ಗಿಸಿಬಿಡುವವನೂ ನೀನಲ್ಲವೋ?
28ನೀನೇ ನನ್ನ ದೀಪವನ್ನು ಹೊತ್ತಿಸುವವನಲ್ಲವೇ; ನನ್ನ ದೇವರಾದ ಯೆಹೋವನು ನನಗೆ ಬೆಳಕನ್ನು ಕೊಟ್ಟು ಕತ್ತಲನ್ನು ಪರಿಹರಿಸುವವನು.
29ನಿನ್ನ ಬಲದಿಂದ ದಂಡಿನ ಮೇಲೆ ಬೀಳುವೆನು; ನನ್ನ ದೇವರ ಸಹಾಯದಿಂದ ಗೋಡೆಯನ್ನು ಹಾರುವೆನು.
30ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು; ಯೆಹೋವನ ವಚನವು ಶುದ್ಧವಾದದ್ದು. ಆತನು ಆಶ್ರಿತರೆಲ್ಲರಿಗೆ ಗುರಾಣಿಯಾಗಿದ್ದಾನೆ.
31ಯೆಹೋವನಲ್ಲದೆ ದೇವರು ಯಾರು? ನಮ್ಮ ದೇವರ ಹೊರತು ಶರಣನು ಎಲ್ಲಿ?
32ನನಗೆ ಶೌರ್ಯವೆಂಬ ನಡುಕಟ್ಟನ್ನು ಬಿಗಿಯುವವನೂ, ನನ್ನ ಮಾರ್ಗವನ್ನು ಸರಾಗ ಮಾಡುವವನೂ ದೇವರೇ.
33ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕು ಮಾಡುತ್ತಾನೆ; ನನ್ನನ್ನು ಉನ್ನತಪ್ರದೇಶಗಳಲ್ಲಿ ನಿಲ್ಲಿಸುತ್ತಾನೆ.
34ಆತನೇ ನನಗೆ ಯುದ್ಧವಿದ್ಯೆಯನ್ನು ಕಲಿಸಿದ್ದರಿಂದ ನಾನು ತಾಮ್ರದ ಬಿಲ್ಲನ್ನಾದರೂ ಉಪಯೋಗಿಸಬಲ್ಲೆನು.
35ನೀನೇ ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ. ನಿನ್ನ ಬಲಗೈ ನನಗೆ ಆಧಾರ; ನಿನ್ನ ಕೃಪಾಕಟಾಕ್ಷವು ನನಗೆ ದೊಡ್ಡಸ್ತಿಕೆಯನ್ನು ಉಂಟುಮಾಡಿದೆ.
36ನೀನು ನನ್ನ ಕಾಲುಗಳಿಗೆ ವಿಶಾಲ ಸ್ಥಳವನ್ನು ಕೊಟ್ಟಿದ್ದರಿಂದ ನನ್ನ ಪಾದಗಳು ಕದಲುವುದಿಲ್ಲ.
37ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದುಕೊಳ್ಳುವೆನು; ಅವರನ್ನು ಇಲ್ಲದಂತೆ ಮಾಡುವವರೆಗೂ ಹಿಂದಿರುಗುವುದಿಲ್ಲ.
38ಅವರನ್ನು ಹೊಡೆದು ಏಳಲಾರದಂತೆ ಮಾಡುವೆನು; ನನ್ನ ಪಾದದ ಕೆಳಗೆ ಬೀಳುವರು.
39ನೀನು ನನಗೆ ಯುದ್ಧಕ್ಕಾಗಿ ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದೀ; ಎದುರಾಳಿಗಳನ್ನು ಕುಗ್ಗಿಸಿ ನನಗೆ ಅಧೀನಮಾಡಿದ್ದೀ.

Read ಕೀರ್ತ 18ಕೀರ್ತ 18
Compare ಕೀರ್ತ 18:26-39ಕೀರ್ತ 18:26-39