Text copied!
Bibles in Kannada

ಕೀರ್ತ 18:26-39 in Kannada

Help us?

ಕೀರ್ತ 18:26-39 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಶುದ್ಧನಿಗೆ ಪರಿಶುದ್ಧನೂ, ಮೂರ್ಖನಿಗೆ ವಕ್ರನೂ ಆಗಿರುವಿ.
27 ದೀನರನ್ನು ಉದ್ಧರಿಸುವವನೂ, ಗರ್ವದ ಕಣ್ಣುಳ್ಳವರನ್ನು ತಗ್ಗಿಸಿಬಿಡುವವನೂ ನೀನಲ್ಲವೋ?
28 ನೀನೇ ನನ್ನ ದೀಪವನ್ನು ಹೊತ್ತಿಸುವವನಲ್ಲವೇ; ನನ್ನ ದೇವರಾದ ಯೆಹೋವನು ನನಗೆ ಬೆಳಕನ್ನು ಕೊಟ್ಟು ಕತ್ತಲನ್ನು ಪರಿಹರಿಸುವವನು.
29 ನಿನ್ನ ಬಲದಿಂದ ದಂಡಿನ ಮೇಲೆ ಬೀಳುವೆನು; ನನ್ನ ದೇವರ ಸಹಾಯದಿಂದ ಗೋಡೆಯನ್ನು ಹಾರುವೆನು.
30 ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು; ಯೆಹೋವನ ವಚನವು ಶುದ್ಧವಾದದ್ದು. ಆತನು ಆಶ್ರಿತರೆಲ್ಲರಿಗೆ ಗುರಾಣಿಯಾಗಿದ್ದಾನೆ.
31 ಯೆಹೋವನಲ್ಲದೆ ದೇವರು ಯಾರು? ನಮ್ಮ ದೇವರ ಹೊರತು ಶರಣನು ಎಲ್ಲಿ?
32 ನನಗೆ ಶೌರ್ಯವೆಂಬ ನಡುಕಟ್ಟನ್ನು ಬಿಗಿಯುವವನೂ, ನನ್ನ ಮಾರ್ಗವನ್ನು ಸರಾಗ ಮಾಡುವವನೂ ದೇವರೇ.
33 ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕು ಮಾಡುತ್ತಾನೆ; ನನ್ನನ್ನು ಉನ್ನತಪ್ರದೇಶಗಳಲ್ಲಿ ನಿಲ್ಲಿಸುತ್ತಾನೆ.
34 ಆತನೇ ನನಗೆ ಯುದ್ಧವಿದ್ಯೆಯನ್ನು ಕಲಿಸಿದ್ದರಿಂದ ನಾನು ತಾಮ್ರದ ಬಿಲ್ಲನ್ನಾದರೂ ಉಪಯೋಗಿಸಬಲ್ಲೆನು.
35 ನೀನೇ ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ. ನಿನ್ನ ಬಲಗೈ ನನಗೆ ಆಧಾರ; ನಿನ್ನ ಕೃಪಾಕಟಾಕ್ಷವು ನನಗೆ ದೊಡ್ಡಸ್ತಿಕೆಯನ್ನು ಉಂಟುಮಾಡಿದೆ.
36 ನೀನು ನನ್ನ ಕಾಲುಗಳಿಗೆ ವಿಶಾಲ ಸ್ಥಳವನ್ನು ಕೊಟ್ಟಿದ್ದರಿಂದ ನನ್ನ ಪಾದಗಳು ಕದಲುವುದಿಲ್ಲ.
37 ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದುಕೊಳ್ಳುವೆನು; ಅವರನ್ನು ಇಲ್ಲದಂತೆ ಮಾಡುವವರೆಗೂ ಹಿಂದಿರುಗುವುದಿಲ್ಲ.
38 ಅವರನ್ನು ಹೊಡೆದು ಏಳಲಾರದಂತೆ ಮಾಡುವೆನು; ನನ್ನ ಪಾದದ ಕೆಳಗೆ ಬೀಳುವರು.
39 ನೀನು ನನಗೆ ಯುದ್ಧಕ್ಕಾಗಿ ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದೀ; ಎದುರಾಳಿಗಳನ್ನು ಕುಗ್ಗಿಸಿ ನನಗೆ ಅಧೀನಮಾಡಿದ್ದೀ.
ಕೀರ್ತ 18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019