Text copied!
Bibles in Kannada

ಕೀರ್ತ 18:3-8 in Kannada

Help us?

ಕೀರ್ತ 18:3-8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನು ಸ್ತೋತ್ರಕ್ಕೆ ಅರ್ಹನು; ನಾನು ಆತನಿಗೆ ಮೊರೆಯಿಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ.
4 ಮೃತ್ಯುಪಾಶಗಳು ನನಗೆ ಸುತ್ತಿಕೊಂಡವು; ನಾಶಪ್ರವಾಹವು ನನ್ನನ್ನು ನಡುಗಿಸಿತು.
5 ಪಾತಾಳಪಾಶಗಳು ನನ್ನನ್ನು ಆವರಿಸಿಕೊಂಡವು; ಮರಣಕರವಾದ ಉರುಲುಗಳು ನನ್ನೆದುರಿನಲ್ಲಿದ್ದವು.
6 ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಶಬ್ದವನ್ನು ಕೇಳಿದನು; ನನ್ನ ಕೂಗು ಆತನಿಗೆ ಕೇಳಿಸಿತು.
7 ಆಗ ಆತನಿಗೆ ಸಿಟ್ಟೇರಿದ್ದರಿಂದ, ಭೂಮಿಯು ಗಡಗಡನೆ ಕಂಪಿಸಿತು, ಪರ್ವತಗಳ ಬುಡಗಳು ನಡುಗಿ ಕದಲಿದವು.
8 ಆತನ ಮೂಗಿನಿಂದ ಹೊಗೆಯು ಎದ್ದು; ಆತನ ಬಾಯಿಂದ ಅಗ್ನಿಜ್ವಾಲೆ ಹೊರಟು, ಸಿಕ್ಕಿದ್ದೆಲ್ಲವನ್ನು ದಹಿಸಿ ಕೆಂಡವನ್ನಾಗಿ ಮಾಡಿತು.
ಕೀರ್ತ 18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019