Text copied!
Bibles in Kannada

ಕೀರ್ತ 18:33-39 in Kannada

Help us?

ಕೀರ್ತ 18:33-39 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕು ಮಾಡುತ್ತಾನೆ; ನನ್ನನ್ನು ಉನ್ನತಪ್ರದೇಶಗಳಲ್ಲಿ ನಿಲ್ಲಿಸುತ್ತಾನೆ.
34 ಆತನೇ ನನಗೆ ಯುದ್ಧವಿದ್ಯೆಯನ್ನು ಕಲಿಸಿದ್ದರಿಂದ ನಾನು ತಾಮ್ರದ ಬಿಲ್ಲನ್ನಾದರೂ ಉಪಯೋಗಿಸಬಲ್ಲೆನು.
35 ನೀನೇ ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ. ನಿನ್ನ ಬಲಗೈ ನನಗೆ ಆಧಾರ; ನಿನ್ನ ಕೃಪಾಕಟಾಕ್ಷವು ನನಗೆ ದೊಡ್ಡಸ್ತಿಕೆಯನ್ನು ಉಂಟುಮಾಡಿದೆ.
36 ನೀನು ನನ್ನ ಕಾಲುಗಳಿಗೆ ವಿಶಾಲ ಸ್ಥಳವನ್ನು ಕೊಟ್ಟಿದ್ದರಿಂದ ನನ್ನ ಪಾದಗಳು ಕದಲುವುದಿಲ್ಲ.
37 ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದುಕೊಳ್ಳುವೆನು; ಅವರನ್ನು ಇಲ್ಲದಂತೆ ಮಾಡುವವರೆಗೂ ಹಿಂದಿರುಗುವುದಿಲ್ಲ.
38 ಅವರನ್ನು ಹೊಡೆದು ಏಳಲಾರದಂತೆ ಮಾಡುವೆನು; ನನ್ನ ಪಾದದ ಕೆಳಗೆ ಬೀಳುವರು.
39 ನೀನು ನನಗೆ ಯುದ್ಧಕ್ಕಾಗಿ ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದೀ; ಎದುರಾಳಿಗಳನ್ನು ಕುಗ್ಗಿಸಿ ನನಗೆ ಅಧೀನಮಾಡಿದ್ದೀ.
ಕೀರ್ತ 18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019