41ಅವರು ಕೂಗಿಕೊಂಡರೂ ರಕ್ಷಿಸುವವನಿಲ್ಲ; ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ.
42ಗಾಳಿಯಿಂದ ಬಡಿಸಿಕೊಂಡು ಹೋಗುವ ಧೂಳನ್ನೋ ಎಂಬಂತೆ ಅವರನ್ನು ಪುಡಿಪುಡಿಮಾಡಿದೆನು. ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ಎಸೆದುಬಿಟ್ಟೆನು.
43ಜನರ ಕಲಹಗಳಿಗೆ ನನ್ನನ್ನು ತಪ್ಪಿಸಿ ಜನಾಂಗಗಳಿಗೆ ದೊರೆಯಾಗುವಂತೆ ಮಾಡಿದ್ದೀ; ನಾನರಿಯದ ಜನಾಂಗದವರು ಸಹ ನನಗೆ ಅಧೀನರಾಗುವರು.