46ಯೆಹೋವನು ಚೈತನ್ಯಸ್ವರೂಪನು; ನನ್ನ ಶರಣನಿಗೆ ಸ್ತೋತ್ರ; ನನ್ನನ್ನು ರಕ್ಷಿಸುವ ದೇವರಿಗೆ ಕೊಂಡಾಟವಾಗಲಿ.
47ಆತನು ನನ್ನ ಶತ್ರುಗಳಿಗೆ ಪ್ರತಿದಂಡನೆಮಾಡುವ ದೇವರು; ಜನಾಂಗಗಳನ್ನು ನನಗೆ ಅಧೀನಪಡಿಸುತ್ತಾನೆ.
48ಶತ್ರುಗಳಿಂದ ನನ್ನನ್ನು ಬಿಡಿಸುವಾತನೇ, ನೀನು ನನ್ನನ್ನು ನನ್ನ ಎದುರಾಳಿಗಳಿಗೆ ತಪ್ಪಿಸಿ ಉನ್ನತಪಡಿಸುತ್ತೀ; ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತೀ.