47ಆತನು ನನ್ನ ಶತ್ರುಗಳಿಗೆ ಪ್ರತಿದಂಡನೆಮಾಡುವ ದೇವರು; ಜನಾಂಗಗಳನ್ನು ನನಗೆ ಅಧೀನಪಡಿಸುತ್ತಾನೆ.
48ಶತ್ರುಗಳಿಂದ ನನ್ನನ್ನು ಬಿಡಿಸುವಾತನೇ, ನೀನು ನನ್ನನ್ನು ನನ್ನ ಎದುರಾಳಿಗಳಿಗೆ ತಪ್ಪಿಸಿ ಉನ್ನತಪಡಿಸುತ್ತೀ; ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತೀ.
49ಈ ಕಾರಣದಿಂದ ಯೆಹೋವನೇ, ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು.
50ಆತನು ತಾನು ನೇಮಿಸಿದ ಅರಸನಿಗೋಸ್ಕರ ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ; ತಾನು ಅಭಿಷೇಕಿಸಿದ ದಾವೀದನಿಗೂ ಮತ್ತು ಅವನ ಸಂತತಿಯವರಿಗೂ ಸದಾಕಾಲ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ.