8 ಆತನ ಮೂಗಿನಿಂದ ಹೊಗೆಯು ಎದ್ದು; ಆತನ ಬಾಯಿಂದ ಅಗ್ನಿಜ್ವಾಲೆ ಹೊರಟು, ಸಿಕ್ಕಿದ್ದೆಲ್ಲವನ್ನು ದಹಿಸಿ ಕೆಂಡವನ್ನಾಗಿ ಮಾಡಿತು.
9 ಆತನು ಆಕಾಶವನ್ನು ತಗ್ಗಿಸಿ ಇಳಿದು ಬಂದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು.
10 ಕೆರೂಬಿವಾಹನನಾಗಿ ಹಾರಿ, ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಆತನು ಇಳಿದು ಬಂದನು.
11 ಕತ್ತಲನ್ನು ತನ್ನ ಸುತ್ತಲು ಗುಡಾರದಂತೆ ಕವಿಸಿಕೊಂಡು, ಜಲಮಯವಾಗಿರುವ ನೀಲಮೇಘಗಳ ಮಧ್ಯದಲ್ಲಿ ಮರೆಯಾದನು.
12 ಆತನ ಸನ್ನಿಧಿಯ ಪ್ರಕಾಶದಿಂದ ಕಲ್ಮಳೆಯೂ, ಉರಿಗೆಂಡಗಳೂ ಹೊರಟು, ಆತನ ಸುತ್ತಲಿದ್ದ ಕಪ್ಪು ಮೋಡಗಳನ್ನು ದಾಟಿ ಸುರಿದವು.
13 ಯೆಹೋವನು ಆಕಾಶದಲ್ಲಿ ಗುಡುಗಿದನು; ಪರಾತ್ಪರನಾದ ದೇವರು ಧ್ವನಿಗೊಟ್ಟನು. ಕಲ್ಮಳೆಯೂ, ಉರಿಗೆಂಡಗಳೂ ಹೊರಟವು.