Text copied!
Bibles in Kannada

ಕೀರ್ತ 19:1-7 in Kannada

Help us?

ಕೀರ್ತ 19:1-7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ಆಕಾಶವು ದೇವರ ಪ್ರಭಾವವನ್ನು ಪ್ರಚುರಪಡಿಸುತ್ತದೆ; ಗಗನವು ಆತನ ಕೈಕೆಲಸವನ್ನು ತಿಳಿಸುತ್ತದೆ.
2 ದಿನವು ದಿನಕ್ಕೆ ದೇವರ ಮಹಿಮೆಯನ್ನು ತಿಳಿಸುತ್ತಿರುವುದು; ರಾತ್ರಿಯು ರಾತ್ರಿಗೆ ಜ್ಞಾನವನ್ನು ಪ್ರಕಟಿಸುತ್ತಿರುವುದು.
3 ಶಬ್ದವಿಲ್ಲ, ಮಾತಿಲ್ಲ, ಅವುಗಳ ಸ್ವರ ಕೇಳಿಸುವುದಿಲ್ಲ.
4 ಆದರೂ ಅವುಗಳ ಪ್ರಭುತ್ವವು ಭೂಮಿಯಲ್ಲೆಲ್ಲಾ ಪ್ರಸರಿಸಿದೆ; ಅವುಗಳ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿರುತ್ತವೆ. ಅಲ್ಲಿ ದೇವರು ಸೂರ್ಯನಿಗೋಸ್ಕರ ಗುಡಾರವನ್ನು ಏರ್ಪಡಿಸಿದ್ದಾನೆ.
5 ಅವನು ತನ್ನ ಮಂಟಪದೊಳಗಿಂದ ಬರುವ ಮದಲಿಂಗನೋ ಎಂಬಂತೆ ಹೊರಟುಬರುವನು. ಅವನು ಶೂರನಂತೆ ತನಗೆ ನೇಮಕವಾದ ಮಾರ್ಗದಲ್ಲಿ ಓಡುವುದಕ್ಕೆ ಉಲ್ಲಾಸಗೊಂಡಿದ್ದಾನೆ.
6 ಆಕಾಶದ ಒಂದು ಕಡೆಯಿಂದ ಹೊರಟು ಮತ್ತೊಂದು ಕಡೆಗೆ ಬರುತ್ತಾನೆ; ಅವನ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ.
7 ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು; ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆಗಳು ನಂಬಿಕೆಗೆ ಯೋಗ್ಯವಾದದ್ದು; ಅವು ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ.
ಕೀರ್ತ 19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019