Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 19

ಕೀರ್ತ 19:4-9

Help us?
Click on verse(s) to share them!
4ಆದರೂ ಅವುಗಳ ಪ್ರಭುತ್ವವು ಭೂಮಿಯಲ್ಲೆಲ್ಲಾ ಪ್ರಸರಿಸಿದೆ; ಅವುಗಳ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿರುತ್ತವೆ. ಅಲ್ಲಿ ದೇವರು ಸೂರ್ಯನಿಗೋಸ್ಕರ ಗುಡಾರವನ್ನು ಏರ್ಪಡಿಸಿದ್ದಾನೆ.
5ಅವನು ತನ್ನ ಮಂಟಪದೊಳಗಿಂದ ಬರುವ ಮದಲಿಂಗನೋ ಎಂಬಂತೆ ಹೊರಟುಬರುವನು. ಅವನು ಶೂರನಂತೆ ತನಗೆ ನೇಮಕವಾದ ಮಾರ್ಗದಲ್ಲಿ ಓಡುವುದಕ್ಕೆ ಉಲ್ಲಾಸಗೊಂಡಿದ್ದಾನೆ.
6ಆಕಾಶದ ಒಂದು ಕಡೆಯಿಂದ ಹೊರಟು ಮತ್ತೊಂದು ಕಡೆಗೆ ಬರುತ್ತಾನೆ; ಅವನ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ.
7ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು; ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆಗಳು ನಂಬಿಕೆಗೆ ಯೋಗ್ಯವಾದದ್ದು; ಅವು ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ.
8ಯೆಹೋವನ ಆಜ್ಞೆಗಳು ನೀತಿಯುಳ್ಳವುಗಳಾಗಿವೆ; ಮನಸ್ಸನ್ನು ಹರ್ಷಪಡಿಸುತ್ತವೆ. ಯೆಹೋವನ ಆಜ್ಞೆ ಪವಿತ್ರವಾದದ್ದು; ಕಣ್ಣುಗಳನ್ನು ಕಳೆಗೊಳಿಸುತ್ತದೆ.
9ಯೆಹೋವನ ಭಯ ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದೇ. ಯೆಹೋವನ ಕಟ್ಟಳೆಗಳು ಯಥಾರ್ಥವಾದವುಗಳು; ಅವು ಕೇವಲ ನ್ಯಾಯವಾಗಿವೆ.

Read ಕೀರ್ತ 19ಕೀರ್ತ 19
Compare ಕೀರ್ತ 19:4-9ಕೀರ್ತ 19:4-9