Text copied!
Bibles in Kannada

ಕೀರ್ತ 21:2-11 in Kannada

Help us?

ಕೀರ್ತ 21:2-11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೀನು ಅವನ ಪ್ರಾರ್ಥನೆಯನ್ನು ನಿರಾಕರಿಸದೆ, ಅವನ ಇಷ್ಟಾರ್ಥವನ್ನು ನೆರವೇರಿಸಿದಿಯಲ್ಲಾ. ಸೆಲಾ
3 ನಾನಾ ಶುಭಗಳೊಡನೆ ನೀನೇ ಅವನನ್ನು ಎದುರುಗೊಂಡಿಯಲ್ಲಾ; ಅವನ ತಲೆಯ ಮೇಲೆ ಸುವರ್ಣ ಕಿರೀಟವನ್ನು ಇಟ್ಟಿದ್ದೀ.
4 ಅವನು ದೀರ್ಘಾಯುಷ್ಯವನ್ನು ಬೇಡಿಕೊಳ್ಳಲು, ನೀನು ಅವನಿಗೆ ಯುಗಯುಗಾಂತರಗಳ ಆಯುಷ್ಯವನ್ನು ಅನುಗ್ರಹಿಸಿದ್ದೀ.
5 ನಿನ್ನ ರಕ್ಷಣಕಾರ್ಯದಿಂದ ಅವನ ಗೌರವ ಬಹು ವೃದ್ಧಿಯಾಯಿತು; ಘನತೆ ಮತ್ತು ವೈಭವಗಳನ್ನು ಅವನಿಗೆ ಅನುಗ್ರಹಿಸಿದ್ದೀ.
6 ಅವನಿಗೆ ಶಾಶ್ವತವಾದ ಸೌಭಾಗ್ಯನಿಧಿಯನ್ನು ದಯಪಾಲಿಸಿದ್ದೀ; ಅವನನ್ನು ನಿನ್ನ ಸನ್ನಿಧಿಯಲ್ಲಿ ಅತ್ಯಾನಂದಪಡಿಸಿದ್ದೀ.
7 ಅರಸನು ಯೆಹೋವನಲ್ಲಿಯೇ ಭರವಸವಿಟ್ಟಿದ್ದಾನೆ; ಪರಾತ್ಪರನಾದ ದೇವರ ಶಾಶ್ವತ ಪ್ರೀತಿಯ ನಿಮಿತ್ತ ಅವನು ಕದಲುವುದೇ ಇಲ್ಲ.
8 ಶತ್ರುಗಳೆಲ್ಲರು ನಿನಗೆ ಸಿಕ್ಕುವರು; ಭುಜಬಲದಿಂದ ನಿನ್ನ ಹಗೆಗಳನ್ನು ಹಿಡಿಯುವಿ.
9 ನೀನು ಪ್ರತ್ಯಕ್ಷನಾಗುವಾಗ ಉರಿಯುವ ಕುಲುಮೆಯಂತಿದ್ದು ಅವರನ್ನು ಬೂದಿ ಮಾಡುವಿ. ಯೆಹೋವನು ಮಹಾಕೋಪದಿಂದ ಅವರನ್ನು ನಾಶ ಮಾಡುವನು; ಆತನ ಕೋಪಾಗ್ನಿ ಅವರನ್ನು ದಹಿಸಿಬಿಡುವುದು.
10 ನೀನು ಅವರನ್ನು ಸಂಹರಿಸಿ, ಭೂಮಿಯ ಮೇಲೆ ಅವರ ಸಂತತಿಯೇ ಇಲ್ಲದಂತೆ ಮಾಡುವಿ; ಅವರ ವಂಶದವರು ಮನುಷ್ಯರೊಳಗೆ ಉಳಿಯುವುದೇ ಇಲ್ಲ.
11 ಅವರು ತಂತ್ರೋಪಾಯಗಳನ್ನು ಕಲ್ಪಿಸಿ, ನಿನಗೆ ಕೇಡನ್ನು ಮಾಡಬೇಕೆಂದು ಆಲೋಚಿಸಿದರೂ ಅದು ನಡೆಯುವುದಿಲ್ಲ.
ಕೀರ್ತ 21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019