Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 21

ಕೀರ್ತ 21:5-13

Help us?
Click on verse(s) to share them!
5ನಿನ್ನ ರಕ್ಷಣಕಾರ್ಯದಿಂದ ಅವನ ಗೌರವ ಬಹು ವೃದ್ಧಿಯಾಯಿತು; ಘನತೆ ಮತ್ತು ವೈಭವಗಳನ್ನು ಅವನಿಗೆ ಅನುಗ್ರಹಿಸಿದ್ದೀ.
6ಅವನಿಗೆ ಶಾಶ್ವತವಾದ ಸೌಭಾಗ್ಯನಿಧಿಯನ್ನು ದಯಪಾಲಿಸಿದ್ದೀ; ಅವನನ್ನು ನಿನ್ನ ಸನ್ನಿಧಿಯಲ್ಲಿ ಅತ್ಯಾನಂದಪಡಿಸಿದ್ದೀ.
7ಅರಸನು ಯೆಹೋವನಲ್ಲಿಯೇ ಭರವಸವಿಟ್ಟಿದ್ದಾನೆ; ಪರಾತ್ಪರನಾದ ದೇವರ ಶಾಶ್ವತ ಪ್ರೀತಿಯ ನಿಮಿತ್ತ ಅವನು ಕದಲುವುದೇ ಇಲ್ಲ.
8ಶತ್ರುಗಳೆಲ್ಲರು ನಿನಗೆ ಸಿಕ್ಕುವರು; ಭುಜಬಲದಿಂದ ನಿನ್ನ ಹಗೆಗಳನ್ನು ಹಿಡಿಯುವಿ.
9ನೀನು ಪ್ರತ್ಯಕ್ಷನಾಗುವಾಗ ಉರಿಯುವ ಕುಲುಮೆಯಂತಿದ್ದು ಅವರನ್ನು ಬೂದಿ ಮಾಡುವಿ. ಯೆಹೋವನು ಮಹಾಕೋಪದಿಂದ ಅವರನ್ನು ನಾಶ ಮಾಡುವನು; ಆತನ ಕೋಪಾಗ್ನಿ ಅವರನ್ನು ದಹಿಸಿಬಿಡುವುದು.
10ನೀನು ಅವರನ್ನು ಸಂಹರಿಸಿ, ಭೂಮಿಯ ಮೇಲೆ ಅವರ ಸಂತತಿಯೇ ಇಲ್ಲದಂತೆ ಮಾಡುವಿ; ಅವರ ವಂಶದವರು ಮನುಷ್ಯರೊಳಗೆ ಉಳಿಯುವುದೇ ಇಲ್ಲ.
11ಅವರು ತಂತ್ರೋಪಾಯಗಳನ್ನು ಕಲ್ಪಿಸಿ, ನಿನಗೆ ಕೇಡನ್ನು ಮಾಡಬೇಕೆಂದು ಆಲೋಚಿಸಿದರೂ ಅದು ನಡೆಯುವುದಿಲ್ಲ.
12ನೀನು ನಿನ್ನ ಬಾಣಗಳನ್ನು ಬಿಲ್ಲಿಗೆ ಹೂಡಿ, ಅವರ ಮುಖಗಳ ಮೇಲೆ ಎಸೆದು, ಅವರು ಬೆನ್ನುತೋರಿಸಿ ಓಡಿಹೋಗುವಂತೆ ಮಾಡುವಿ.
13ಯೆಹೋವನೇ, ಪರಾಕ್ರಮದಿಂದ ನಿನ್ನನ್ನು ಘನಪಡಿಸಿಕೋ; ನಾವು ಗಾಯನಮಾಡುತ್ತಾ ನಿನ್ನ ಶೂರತ್ವವನ್ನು ಕೊಂಡಾಡುವೆವು.

Read ಕೀರ್ತ 21ಕೀರ್ತ 21
Compare ಕೀರ್ತ 21:5-13ಕೀರ್ತ 21:5-13