16ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; ದುಷ್ಟರ ಗುಂಪು ನನ್ನನ್ನು ಆವರಿಸಿಕೊಂಡಿದೆ. ನನ್ನ ಕೈಕಾಲುಗಳನ್ನು ತಿವಿದಿದ್ದಾರೆ.
17ನನ್ನ ಎಲುಬುಗಳನ್ನೆಲ್ಲಾ ಎಣಿಸುವುದಕ್ಕಾಗುವುದು; ಅವರೋ ನನ್ನನ್ನು ನೋಡಿ ನೋಡಿ ಹಿಗ್ಗುತ್ತಾರೆ.
18ನನ್ನ ಮೇಲ್ಹೊದಿಕೆಯನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ; ನನ್ನ ಅಂಗಿಗಾಗಿ ಚೀಟುಹಾಕುತ್ತಾರೆ.
19ಯೆಹೋವನೇ, ನನ್ನ ರಕ್ಷಕನೇ, ನೀನಾದರೋ ದೂರವಾಗಿರಬೇಡ; ಬೇಗ ಬಂದು ಸಹಾಯಮಾಡು.
20ಕತ್ತಿಗೆ ಸಿಕ್ಕದಂತೆ ನನ್ನನ್ನು ತಪ್ಪಿಸು; ನನ್ನ ಪ್ರಿಯ ಪ್ರಾಣವು ನಾಯಿಯ ವಶವಾಗದಂತೆ ಕಾಪಾಡು.
21ಸಿಂಹಗಳ ಬಾಯಿಂದ ರಕ್ಷಿಸು, ಕಾಡುಕೋಣಗಳ ಕೊಂಬುಗಳಿಂದ ನನ್ನನ್ನು ತಪ್ಪಿಸು.