Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 22

ಕೀರ್ತ 22:17-22

Help us?
Click on verse(s) to share them!
17ನನ್ನ ಎಲುಬುಗಳನ್ನೆಲ್ಲಾ ಎಣಿಸುವುದಕ್ಕಾಗುವುದು; ಅವರೋ ನನ್ನನ್ನು ನೋಡಿ ನೋಡಿ ಹಿಗ್ಗುತ್ತಾರೆ.
18ನನ್ನ ಮೇಲ್ಹೊದಿಕೆಯನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ; ನನ್ನ ಅಂಗಿಗಾಗಿ ಚೀಟುಹಾಕುತ್ತಾರೆ.
19ಯೆಹೋವನೇ, ನನ್ನ ರಕ್ಷಕನೇ, ನೀನಾದರೋ ದೂರವಾಗಿರಬೇಡ; ಬೇಗ ಬಂದು ಸಹಾಯಮಾಡು.
20ಕತ್ತಿಗೆ ಸಿಕ್ಕದಂತೆ ನನ್ನನ್ನು ತಪ್ಪಿಸು; ನನ್ನ ಪ್ರಿಯ ಪ್ರಾಣವು ನಾಯಿಯ ವಶವಾಗದಂತೆ ಕಾಪಾಡು.
21ಸಿಂಹಗಳ ಬಾಯಿಂದ ರಕ್ಷಿಸು, ಕಾಡುಕೋಣಗಳ ಕೊಂಬುಗಳಿಂದ ನನ್ನನ್ನು ತಪ್ಪಿಸು.
22ನಿನ್ನ ನಾಮ ಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.

Read ಕೀರ್ತ 22ಕೀರ್ತ 22
Compare ಕೀರ್ತ 22:17-22ಕೀರ್ತ 22:17-22