24ಆತನು ಕುಗ್ಗಿಹೋದವನ ದುರವಸ್ಥೆಯನ್ನು ತಿರಸ್ಕರಿಸಲಿಲ್ಲ, ಅದಕ್ಕೆ ಅಸಹ್ಯಪಡಲಿಲ್ಲ; ತನ್ನ ಮುಖವನ್ನು ಅವನಿಗೆ ಮರೆಮಾಡದೆ, ಅವನ ಪ್ರಾರ್ಥನೆಗೆ ಕಿವಿಗೊಟ್ಟನು.
25ನಾನು ಮಹಾಸಭೆಯಲ್ಲಿ ಮಾಡುವ ಸ್ತೋತ್ರಕ್ಕೆ ನೀನೇ ಆಧಾರನು; ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು.
26ದೀನರು ಉಂಡು ತೃಪ್ತರಾಗುವರು; ಯೆಹೋವನ ಭಕ್ತರೆಲ್ಲರೂ ಆತನನ್ನು ಕೊಂಡಾಡುವರು. ಅವರ ಅಂತರಾತ್ಮವು ಯಾವಾಗಲು ಚೈತನ್ಯವುಳ್ಳದ್ದಾಗಿರಲಿ.
27ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.
28ರಾಜ್ಯವು ಯೆಹೋವನದೇ; ಎಲ್ಲಾ ಜನಾಂಗಗಳಿಗೂ ಆತನೇ ಒಡೆಯನು.